ನ್ಯೂಸ್

ಅಮೆರಿಕಾದಲ್ಲಿ 'ಲಿಯೋ' ಕಮಾಲ್​; ರಿಲೀಸ್​ಗೂ ಮುನ್ನವೇ ದಳಪತಿ ವಿಜಯ್​ ಚಿತ್ರಕ್ಕೆ ಸಿಕ್ತು ಭರ್ಜರಿ ರೆಸ್ಪಾನ್ಸ್​!​​

ಅಮೆರಿಕಾ: ತಮಿಳು ಚಿತ್ರರಂಗದ ಸ್ಟಾರ್​ ನಟ ದಳಪತಿ ವಿಜಯ್​ ಮತ್ತು ನಟಿ ತ್ರಿಶಾ ಕೃಷ್ಣನ್​ ಮುಖ್ಯಭೂಮಿಕೆಯಲ್ಲಿ ಅಭಿನಯದ ಬಹುನಿರೀಕ್ಷಿತ ​'ಲಿಯೋ' ಚಿತ್ರಕ್ಕೆ ಭಾರೀ ನಿರೀಕ್ಷೆಗಳು ವ್ಯಾಪಕವಾಗಿ ವ್ಯಕ್ತವಾಗಿದ್ದು, ಅಮೆರಿಕಾದಲ್ಲಿ ತೆರೆಯಲಾದ ಮುಂಗಡ ಬುಕ್ಕಿಂಗ್ಸ್​​ಗೆ ಇದೀಗ ಭರ್ಜರಿ ರೆಸ್ಪಾನ್ಸ್​ ದೊರಕಿದೆ.

ಲೋಕೇಶ್ ಕನಕರಾಜ್ ನಿರ್ದೇಶನದ ಈ ಚಿತ್ರವು ಇದೇ ಅಕ್ಟೋಬರ್ 19 ರಂದು ಜಾಗತಿಕವಾಗಿ ಬಹುತೇಕ ಚಿತ್ರಮಂದಿರಗಳಲ್ಲಿ ಅದ್ದೂರಿ ಬಿಡುಗಡೆಗೆ ಸಜ್ಜಾಗಿದೆ. ಸದ್ಯ ಅಮೆರಿಕಾದಲ್ಲಿ 'ಲಿಯೋ' ಚಿತ್ರದ ಮುಂಗಡ ಟಿಕೆಟ್ ಬುಕ್ಕಿಂಗ್ಸ್​ ತೆರೆಯಲಾಗಿದ್ದು, ಈಗಾಗಲೇ 350K ಡಾಲರ್​ ಗಳಿಸುವ ಮುಖೇನ 13,000 ಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ಈ ಸುದ್ದಿ ಸದ್ಯ ಚಿತ್ರತಂಡಕ್ಕೆ ಭಾರೀ ಸಂತಸ ನೀಡಿದ್ದು, ಚಿತ್ರವನ್ನು ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಸಿನಿಪ್ರೇಕ್ಷಕರು ಮತ್ತು ವಿಜಯ್​ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ.

ಚಿತ್ರದಲ್ಲಿ ಸಂಜಯ್ ದತ್, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಗೌತಮ್ ವಾಸುದೇವ್ ಮೆನನ್, ಮಿಸ್ಕಿನ್, ಸಂತಿ ಮಾಯಾದೇವಿ, ಮ್ಯಾಥ್ಯೂ ಥಾಮಸ್, ಮನ್ಸೂರ್ ಅಲಿ ಖಾನ್ ಮುಂತಾದವರ ತಾರಾಗಣವಿದೆ,(ಏಜೆನ್ಸೀಸ್).