ನಂಜನಗೂಡು ತಾಲೂಕಿನ ತಾಯೂರು ಗ್ರಾಮದಲ್ಲಿ ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಾಡ್ಯ ರಂಗಸ್ವಾಮಿ, ಮಣಿ ಕೃಷ್ಣ, ತಾಯೂರು ಬಸವರಾಜು, ಸಿದ್ದರಾಜು, ಹಾರೋಪುರ ಶಿವಣ್ಣ, ಕುಮಾರ್, ರೇವಣ್ಣ, ಸತ್ಯರಾಜು ಇತರರಿದ್ದರು. 
ನ್ಯೂಸ್

ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿ

ನಂಜನಗೂಡು: ವಸತಿ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳಿಗೆ ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲೇ ಆಯ್ಕೆ ಮಾಡಿದ್ದು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು.

ತಾಲೂಕಿನ ತಾಯೂರು ಗ್ರಾಮದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಅದಾಲತ್ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡುವ ಮೂಲಕ ಜನರು ಕಚೇರಿಗೆ ಸಣ್ಣಪುಟ್ಟ ಕೆಲಸಗಳಿಗೆ ಅಲೆದಾಡದಂತೆ ನೋಡಿಕೊಳ್ಳಬೇಕು. ಬಿಳಿಗೆರೆ ವ್ಯಾಪ್ತಿಯಲ್ಲಿ ಬಸ್ ಸೌಕರ್ಯ ಕೊರತೆಯಿಂದ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದು ಸಮಸ್ಯೆ ನಿವಾರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನಗಳು ಸೇರಿದಂತೆ ವಿವಿಧ ಕಟ್ಟಡ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಬೇಕು. ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರ ಸೇವೆಗೆ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಾಲುಂಡಿ, ಹರಿಹರಪುರ, ಗೆಜ್ಜಗನಹಳ್ಳಿ, ಹಾರೋಪುರ, ಕೊಟ್ರಯ್ಯನ ಹುಂಡಿ, ಇಗ್ಗಲಿ, ವಡ್ಡರಹುಂಡಿ, ಬೀರಿಹುಂಡಿ ಗ್ರಾಮಗಳ ನಿವಾಸಿಗಳ ಕುಂದುಕೊರತೆ ಆಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾಪಂ ಅಧ್ಯಕ್ಷೆ ಮಣಿ ಕೃಷ್ಣ, ಉಪಾಧ್ಯಕ್ಷೆ ಬಸಮ್ಮ, ಮಾಜಿ ಅಧ್ಯಕ್ಷ ತಾಯೂರು ಬಸವರಾಜು, ಸಿದ್ದರಾಜು, ಹಾರೋಪುರ ಶಿವಣ್ಣ, ಕುಮಾರ್, ರೇವಣ್ಣ, ಸತ್ಯರಾಜು, ಈಶ್ವರ ಗೌಡನಹಳ್ಳಿ ರೇವಣ್ಣ, ಸಾಲುಂಡಿ ಜಯಪ್ಪ, ಗೆಜ್ಜಗನಹಳ್ಳಿ ಶಿವಣ್ಣ, ವಿಠಲ್, ಮಹದೇವಮ್ಮ, ತಾಯೂರು ಬೇಬಿ, ರೇವಮ್ಮ ಮಾಲೇಗೌಡ, ತಾಯೂರು ಮಾದೇಶ್ ಮತ್ತಿತರರು ಉಪಸ್ಥಿತರಿದ್ದರು.