ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಹೆಚ್ಚುವರಿ ವಿಶೇಷ ಅಭಿಯೋಜಕಿಯಾಗಿ ನೇಮಕಗೊಂಡಿದ್ದ ಹಿರಿಯ ವಕೀಲೆ ಜಯನಾ ಕೊಠಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಅವರು ಗೃಹ ಇಲಾಖೆಯ ಉಪ ಕಾರ್ಯದರ್ಶಿಗೆ ಮಂಗಳವಾರ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.