ನ್ಯೂಸ್

ನಾಗಮಂಗಲ ಗಲಭೆ ಪ್ರಕರಣ ಬೆನ್ನೆಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಎತ್ತಂಗಡಿ!

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಬೆನ್ನಲ್ಲೇ ಗುಪ್ತಚರ ಇಲಾಖೆಯ ಎಡಿಜಿಪಿ ಶರತ್​ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಗಲಭೆ ಕೇಸ್​ಗೆ ಇದು ತಲೆದಂಡವೇ ಎಂದು ಪ್ರಶ್ನೆ ಉದ್ಭವಿಸಿದೆ.

ಪೊಲೀಸ್​ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ​ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ ಶರತ್ ಚಂದ್ರ ಅವರನ್ನು ಎತ್ತಂಗಡಿ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಈ ಹಿಂದೆ ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ಅಂದರೆ 2013 ರಿಂದ 18ರಲ್ಲಿ ಹೇಮಂತ್​ ನಿಂಬಾಳ್ಕರ್ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರು. ಇದೀಗ ಮತ್ತೆ ಹೇಮಂತ್ ನಿಂಬಾಳ್ಕರ್​​ಗೆ ಸಿದ್ದರಾಮಯ್ಯ ಮಣೆ ಹಾಕಿದ್ದಾರೆ.

ನಾಗಮಂಗಲ ಗಲಭೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಈ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ. ಈ ಮಧ್ಯೆ ಗುಪ್ತಚರ ಇಲಾಖೆ ಮುಖ್ಯಸ್ಥರ ತಲೆದಂಡ? ಮತ್ತಷ್ಟು ಅನುಮಾನ ಮತ್ತು ಕುತೂಹಲ ಕೆರಳಿಸಿದೆ.