ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ಡಿ.ಮಾಲತೇಶಪ್ಪ ಅವರನ್ನು ಸನ್ಮಾನಿಸಲಾಯಿತು. ಕೆ.ಪಿ.ಬಿಂದುಕುಮಾರ್, ಶಕುಂತಲಾ ಚಂದ್ರಶೇಖರ್, ಜಿ.ವಿಜಯಕುಮಾರ್, ನಾಗರಾಜ್ ಮುಂತಾದವರಿದ್ದರು.  
ನ್ಯೂಸ್

ಅಗ್ನಿವೀರ್ ಯೋಜನೆ ಅತ್ಯುತ್ತಮ: ಡಿ.ಮಾಲತೇಶಪ್ಪ

ಅರವಿಂದ ಅಕ್ಲಾಪುರ

ಶಿವಮೊಗ್ಗ: ಮಕ್ಕಳು ಮುಂದೆ ಅಗ್ನಿವೀರರಾಗಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆ ಅತ್ಯುತ್ತಮವಾಗಿದೆ ಎಂದು ನಿವೃತ್ತ ಸುಬೇದಾರ್ ಡಿ.ಮಾಲತೇಶಪ್ಪ ಹೇಳಿದರು.

ಶನಿವಾರ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಏರ್ಪಡಿಸಿದ್ದ ಕಾರ್ಗಿಲ್ ವಿಜಯ ದಿವಸ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಅಪರೂಪದ್ದು. ಅಲ್ಲಿ ಶಿಸ್ತು, ಸಮಯಪ್ರಜ್ಞೆ, ದೇಶಾಭಿಮಾನ ಬೆಳೆಯುತ್ತದೆ. ಆದರೆ ಇಂದು ಅಗ್ನಿವೀರ್ ಯೋಜನೆ ಬಗ್ಗೆ ಇಲ್ಲಸಲ್ಲದ ಟೀಕೆ ಕೇಳಿ ಬರುತ್ತಿರುವುದು ವಿಪರ್ಯಾಸ ಎಂದರು.
ಸ್ಕೌಟ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ದೇಶಸೇವೆಯ ಮಹತ್ವವನ್ನು ವಿವರಿಸಿದರು. ಗಡಿಯಲ್ಲಿ ವಿದೇಶಿ ಸೈನಿಕರ ದಾಳಿಯಿಂದ ದೇಶವಾಸಿಗಳನ್ನು ರಕ್ಷಣೆ ಮಾಡಲು ಹಗಲು, ರಾತ್ರಿ ಶ್ರಮಿಸುವ ಸೈನಿಕರ ಸೇವೆ ಅನನ್ಯ ಎಂದು ಬಣ್ಣಿಸಿದರು.
ಜಿಲ್ಲಾ ಗೈಡ್ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಜಿಲ್ಲಾ ಕಾರ್ಯದರ್ಶಿ ಎಚ್.ಪರಮೇಶ್ವರ, ಜಂಟಿ ಕಾರ್ಯದರ್ಶಿ ಲಕ್ಷ್ಮೀ ಕೆ.ರವಿ, ಜಿ.ವಿಜಯಕುಮಾರ್, ಮಲ್ಲಿಕಾರ್ಜುನ ಕಾನೂರು, ನಾಗರಾಜ್, ರಾಜೇಶ್ ವಿ.ಅವಲಕ್ಕಿ, ಸಿ.ಎನ್.ಕಾತ್ಯಾಯಿನಿ ಮುಂತಾದವರಿದ್ದರು.