ನವದೆಹಲಿ: ಇಲ್ಲಿನ ಪ್ರತಿಷ್ಠಿತ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನ ಕಿರಿಯ ವೈದ್ಯರೋರ್ವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಸ್ಪತ್ರೆಯ ಹಾಸ್ಟೆಲ್ನ 10ನೇ ಮಹಡಿಯಿಂದ ಕೆಳಕ್ಕೆ ಹಾರಿ ಜೀವ ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅನುರಾಗ್ ಕುಮಾರ್(25) ಏಮ್ಸ್ನಲ್ಲಿ ಜ್ಯೂನಿಯರ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ಏಕಾಏಕಿ ಹಾಸ್ಟೆಲ್ನ 10ನೇ ಫ್ಲೋರ್ನಿಂದ ಕೆಳಕ್ಕೆ ಹಾರಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆ ಒಳಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತಾದರೂ ಜೀವ ಉಳಿಯಲಿಲ್ಲ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.ಇದನ್ನೂ ಓದಿ: ಕೊವಿಡ್-19 ಹಾಟ್ಸ್ಫಾಟ್ ಆಗಿದ್ದ ಮುಂಬೈನ ಧಾರಾವಿಯನ್ನು ಪ್ರಶಂಸಿಸಿದ ಡಬ್ಲ್ಯೂಎಚ್ಒ…!
ಸೈಕಿಯಾಟ್ರಿ ವಿಭಾಗದಲ್ಲಿ ಟ್ರೇನಿಂಗ್ ಪಡೆಯುತ್ತಿದ್ದ ಅನುರಾಗ್ ಕುಮಾರ್ ಏಮ್ಸ್ನ ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು. ಅವರು ಇತ್ತೀಚೆಗೆ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಅನುರಾಗ್ ಅವರ ಮೊಬೈಲ್ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೆ 37 ವರ್ಷದ ಪತ್ರಕರ್ತನೋರ್ವ ಏಮ್ಸ್ನ ನಾಲ್ಕನೇ ಮಹಡಿಯಿಂದ ಹಾರಿ ಸೂಸೈಡ್ ಮಾಡಿಕೊಂಡಿದ್ದರು. (ಏಜೆನ್ಸೀಸ್)