ಮಾಲೆ: ಮಾಲ್ಡೀವ್ಸ್ನ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಬುಧವಾರದಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ.
ಈ ಸಮಯದಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈ ಶಂಕರ್ ಅವರನ್ನು ಭೇಟಿಯಾಗಲಿದ್ದು ಮೊದಲ ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಲಿದ್ದಾರೆ.
ಮೇ 8 ರಿಂದ 10ರ ಅವಧಿಯಲ್ಲಿ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ದೀರ್ಘಾಕಾಲದ ಪಾಲುದಾರಿಕೆ ಬಲಗೊಳಿಸಿಸುವ ಮತ್ತು ಇನ್ನಷ್ಟು ವಿಸ್ತರಿಸುವ ಹಿನ್ನೆಲೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಚೀನಾ ಪರ ಒಲವುಳ್ಳ ಅಲ್ಲಿನ ಅಧ್ಯಕ್ಷ ಮೊಹಮ್ಮದ್ ಮಯಿಝು ಅವರು ಅಧಿಕಾರ ವಹಿಸಿಕೊಂಡ ಆರು ತಿಂಗಳಾಗಿದ್ದು ಈ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ. ಈ ವೇಳೆ ಮಾಲ್ಡೀವ್ಸ್ನ ಉನ್ನತಮಟ್ಟದ ಅಧಿಕಾರಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಭೇಟಿಯಿಂದ ಉಭಯ ದೇಶಗಳ ಸಂಬಂಧ ಮತ್ತೆ ಮರುಕಳಿಸುತ್ತ ಎಂಬುದು ಕುತೂಹಲ ಮೂಡಿಸಿದೆ.
ನನ್ನ ಮೊದಲ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಅಧಿಕೃತ ಭೇಟಿಗಾಗಿ ಹೊಸದಿಲ್ಲಿಗೆ ನಿರ್ಗಮಿಸುತ್ತಿದ್ದೇನೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಜೈ ಶಂಕರ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮಾಲ್ಡೀವ್ಸ್ನ ವಿದೇಶಾಂಗ ಸಚಿವ ಮೂಸಾ ಜಮೀರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.