ಬೆಂಗಳೂರು: (Ajay Rao Divorce) ಸ್ಯಾಂಡಲ್ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ದಂಪತಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತಾಗಿ ಅಜಯ್ ರಾವ್ ಖಾಸಗಿವಾಹಿನಿ ಜತೆ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿವಾಹಿನಿ ಜೊತೆ ಮಾತನಾಡಿದ ನಟ ಅಜಯ್ ರಾವ್, ನನಗೆ ಗೊತ್ತಿಲ್ವಲ ಈ ವಿಚಾರ. ನನ್ನ ಹೆಂಡ್ತಿ ಕೋರ್ಟ್ಗೆ ಹೋಗಿದ್ದಾಳಾ? ಅವಳನ್ನೆ ಕೇಳ್ತೀನಿ ಇರಿ.. ಇರಿ ಎಂದು ನಗುತ್ತಾ ಉತ್ತರಿಸಿದ್ದಾರೆ.
ಅಜಯ್ ರಾವ್ ಹಾಗೂ ಸಪ್ನಾ ಅವರು 2014 ರ ಡಿಸೆಂಬರ್ 18 ರಂದು ಹೊಸಪೇಟೆಯಲ್ಲಿ ಆಪ್ತರು, ಸಂಬಂಧಿಕರ ಎದುರು ಸರಳವಾಗಿ ಈ ಜೋಡಿಯ ವಿವಾಹ ನಡೆದಿತ್ತು. ಈ ದಂಪತಿಗೆ ಚರಿಷ್ಮಾ ಹೆಸರಿನ ಮಗಳಿದ್ದಾಳೆ. ಇದೀಗ ಅಜಯ್ ರಾವ್ ಪತ್ನಿ ಸಪ್ನಾ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 12ರ ಅಡಿಯಲ್ಲಿ ದೂರು ದಾಖಲಿಸಲಿಸಿದ್ದಾರೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಡಿವೋರ್ಸ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಇತ್ತೀಚೆಗೆ ಈ ಜೋಡಿ ಹೊಸ ಮನೆ ಗೃಹ ಪ್ರವೇಶ ಮಾಡಿತ್ತು.ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.
ಕೆಟ್ಟ ಮಹೂರ್ತದಲ್ಲಿ ವಿವಾಹ ಆಗಿದ್ದೀಯಾ, ಆದರೆ ಈ ಮದುವೆ ಒಂದು ವರ್ಷ ಕೂಡ ಬರೋದಿಲ್ಲ. ಡಿವೋರ್ಸ್ ಆಗುತ್ತದೆ’ ಎಂದು ಅಜಯ್ ರಾವ್‌ಗೆ ಜ್ಯೋತಿಷಿಯೊಬ್ಬರು ಹಿಂದೆ ಹೇಳಿದ್ದರು ಎಂದು ಅಜಯ್ ರಾವ್ ಈ ಹಿಂದೆಯೇ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಅದು ಕೂಡಾ ಈ ಸಂದರ್ಭದಲ್ಲಿ ವೈರಲ್ ಆಗುತ್ತಿದೆ.
ಎಕ್ಸ್ ಕ್ಯೂಸ್ಮಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹಿಟ್ ಪಡೆದಿದ್ದ ಅಜಯ್ ರಾವ್ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಇನ್ನೂ ಹಲವು ಹಿಟ್ ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಇತ್ತೀಚೆಗೆ ಅವರ ನಿರ್ಮಾಣದಲ್ಲಿಯೇ ಯುದ್ಧಕಾಂಡ ಚಿತ್ರ ರಿಲೀಸ್ ಆಗಿತ್ತು.