ನ್ಯೂಸ್

ಅಕಾಲಿದಳದ ಕೌನ್ಸಿಲರ್ ಹರ್ಜಿಂದರ್ ಸಿಂಗ್‌ಗೆ ಗುಂಡಿಕ್ಕಿ ಹತ್ಯೆ| Akali-dal-councillor

ದುಷ್ಕರ್ಮಿಗಳು ಕೌನ್ಸಿಲರ್ ಮೇಲೆ ಆರು ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹರ್ಜಿಂದರ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಇಂದು (25) ಶಿರೋಮಣಿ ಅಕಾಲಿ ದಳದ ಕೌನ್ಸಿಲರ್ ಹರ್ಜಿಂದರ್ ಸಿಂಗ್ ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಬೈಕ್‌ನಲ್ಲಿ ಬಂದ ಮೂರರಿಂದ ನಾಲ್ಕು ಮಂದಿ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹರ್ಜಿಂದರ್ ಸಿಂಗ್ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹರ್ಪಾಲ್ ಸಿಂಗ್ ರಾಂಧವಾ ಮಾಹಿತಿ ನೀಡಿದ್ದಾರೆ. ಈ ಮೊದಲು ಹರ್ಜಿಂದರ್ ಸಿಂಗ್ ಮನೆಯ ಮೇಲೆ ಗುಂಡಿನ ದಾಳಿ ನಡೆಸಿ ಬೆದರಿಕೆ ಹಾಕಿದ್ದ ಅದೇ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹರ್ಜಿಂದರ್ ಸಹೋದರ ಪ್ರತಿಕ್ರಿಯಿಸಿದ್ದಾರೆ.

(ಏಜೆನ್ಸೀಸ್)

ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಈ ಪ್ರಕರಣದ ಆರೋಪಿಗಳನ್ನು ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ ಮತ್ತು ಎಲ್ಲಾ ಸುಳಿವುಗಳನ್ನು ಅನುಸರಿಸಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.

ಪೊಲೀಸರು ಅಪರಾಧದ ಸ್ಥಳವನ್ನು ಸೀಲ್ ಮಾಡಿ ಘಟನೆಯ ತನಿಖೆ ಆರಂಭಿಸಿದ್ದಾರೆ. ವಿಧಿವಿಜ್ಞಾನ ತಂಡಗಳು ಸಾಕ್ಷ್ಯಗಳನ್ನು ಪರಿಶೀಲಿಸುತ್ತಿವೆ ಮತ್ತು ಅಧಿಕಾರಿಗಳು ಅಪರಾಧಿಗಳನ್ನು ಗುರುತಿಸಲು ಹತ್ತಿರದ ಪ್ರದೇಶಗಳಿಂದ ಕಣ್ಗಾವಲು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.