ಬೆಂಗಳೂರು: ಕರೊನಾ ಎರಡನೇ ಅಲೆ ಕೈಮೀರುತ್ತಿರುವ ಹಿನ್ನೆಲೆ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇಂದಿನಿಂದ 14 ದಿನದವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಾಗಿದ್ದು, ರಾಜ್ಯಾದ್ಯಂತ ಪೊಲೀಸರು ನಾಕಾಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ.
ಕರೊನಾ ಸರಪಳಿ ತುಂಡರಿಸಲು ಲಾಕ್ಡೌನ್ ಜಾರಿಯಾಗಿದ್ದರೂ ಕೆಲವರು ಅನಗತ್ಯವಾಗಿ ರಸ್ತೆಗೆ ಬಂದು ಪೊಲೀಸರ ಲಾಠಿ ಏಟು ತಿಂದಿದ್ದಾರೆ. ಬೆಳ್ಳಂಬೆಳಗ್ಗೆ ಫೀಲ್ಡ್ಗಿಳಿದ ಪೊಲೀಸರು ವಾಹನ ಸವಾರರಿಗೆ ಬಿಸಿ ಬಿಸಿ ಕಜ್ಜಾಯ ಕೊಟ್ಟು, ವಾಹನ ಸೀಜ್ ಮಾಡಿ ವಾರ್ನಿಂಗ್ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ಬಳ್ಳಾರಿಯಲ್ಲೊಬ್ಬ ಕಾರಿಗೆ ಪೊಲೀಸ್ ಬೋರ್ಡ್ ಹಾಕಿಕೊಂಡು ತಿರುಗಾಡುವಾಗ ಸಿಕ್ಕಿಬಿದ್ದಿದ್ದಾನೆ. ಬಳ್ಳಾರಿಯ ರಾಯಲ್ ಸರ್ಕಲ್ನಲ್ಲಿ ಪೊಲೀಸ್ ಕೈಗೆ ಸಿಕ್ಕಿಬಿದ್ದವನ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ.