ಬೆಂಗಳೂರು: ಹೊಸದಾಗಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಅಸ್ತಿತ್ವಕ್ಕೆ ಬಂದಿದೆ.
2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಈ ಘೋಷಣೆ ಮಾಡಿದ್ದಾರೆ. ಈ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಹೆಸರನ್ನು ಶ್ರೀಗಳು ಘೋಷಣೆ ಮಾಡಿದರು.
ಮೀಸಲಾತಿಗೆ ಮಾರ್ಚ್ 4 ರ ಗಡುವು ನೀಡಿರುವ ಪಂಚಮಸಾಲಿ ಶ್ರೀಗಳು ಉಪವಾಸ ಸತ್ಯಾಗ್ರಹ ಕೂರುವ ಎಚ್ಚರಿಕೆ ನೀಡಿದ್ದಾರೆ. ಶ್ರೀಗಳು ವಿಧಾನಸೌಧಕ್ಕೆ ಪಾದಯಾತ್ರೆ ಬೆಳೆಸಿ ಮನವಿ ಸಲ್ಲಿಸೋಣ ಎಂದು ಹೇಳಿದ್ದಾರೆ. ಆದರೆ ಫೆ 22 ರವರೆಗೆ ವಿಧಾನಸೌಧ ಸುತ್ತಮುತ್ತ ನಿಷೇದಾಜ್ಞೆ ಹೊರಡಿಸಲಾಗಿದೆ.