ಆಲ್ದೂರು: ಪಟ್ಟಣದಲ್ಲಿ ನಿಯಮವನ್ನು ಮೀರಿ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ 3 ಲಾರಿಗಳನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮಳೆಗಾಲ ಆರಂಭವಾಗಿದ್ದು ಅನುಮತಿಗಿಂತ ಅತಿ ಹೆಚ್ಚು ಮರದ ದಿಮ್ಮಿಗಳನ್ನು ಲಾರಿಯಲ್ಲಿ ತುಂಬಿಕೊಂಡು ಸಾಗಿಸಲಾಗುತ್ತಿತ್ತು. ಇದರಿಂದ ರಸ್ತೆಗಳಲ್ಲಿ ಗುಂಡಿ ಬಿದ್ದು ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಜಿಲ್ಲಾಧಿಕಾರಿಗಳು ಟಿಂಬರ್ ಲಾರಿ ಸಂಚರಿಸದಂತೆ ನಿರ್ಬಂಧ ಹೇರಿದ್ದರು. ನಿಯಮವನ್ನು ಮೀರಿ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ 3 ಲಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆಲ್ದೂರು ಪಿಎಸ್‌ಐ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.