ನ್ಯೂಸ್

ಪ್ರಯಾಣಿಕರ ಗಮನಕ್ಕೆ: ಮಾರ್ಚ್​ 31ರವರೆಗೆ ದೇಶದ ಎಲ್ಲ ಪ್ಯಾಸೆಂಜರ್​ ರೈಲು ಪ್ರಯಾಣ ರದ್ದು

ನವದೆಹಲಿ: ದಿನದಿಂದ ದಿನಕ್ಕೆ ಕರೊನಾ ವೈರಸ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್​ 31ರವರೆಗೆ ದೇಶಾದ್ಯಂತ ಎಲ್ಲ ಪ್ಯಾಸೆಂಜರ್​ ರೈಲು ಪ್ರಯಾಣವನ್ನು ಭಾರತೀಯ ರೈಲ್ವೆ ಇಲಾಖೆ ರದ್ದುಪಡಿಸಿದೆ.

ಇಂದು ದೇಶದೆಲ್ಲೆಡೆ ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಪ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ, ದುರಾದೃಷ್ಟವಶಾತ್​ ಇಂದು ಇಬ್ಬರು ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆಯು ಹೆಚ್ಚಾಗಿರುವ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಚ್​ 31ರವರೆಗೆ ಎಲ್ಲ ಪ್ಯಾಸೆಂಜರ್​ ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ.

ದೇಶದಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 7 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. (ಏಜೆನ್ಸೀಸ್​)