ನವದೆಹಲಿ: ಸಂಸತ್ ಆವರಣದಲ್ಲಿ ನಡೆದ ಗಲಾಟೆಯಲ್ಲಿ ಬಿಜೆಪಿ ಸಂಸದರ ಮೇಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಲ್ಲೆ(Rahul Gandhi) ಮಾಡಿ ಗಾಯಗೊಳಿಸಿದ್ದಾರೆ ಎಂಬ ಆರೋಪದ ಮೇಲಿನ ಪ್ರಕರಣದ ತನಿಖೆಯನ್ನು ನಡೆಲು ವಿಶೇಷ ತನಿಖಾ ತಂಡಗಳು ರಚಿಸಲಾಗಿದೆ ಎಂದು ವರದಿಯಾಗಿದೆ.
ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ ಎಂದು ಶಾ ವಿರುದ್ಧ ಕಾಂಗ್ರೆಸ್ ನಾಯಕರು, ಪ್ರತಿಭಟನೆ ನಡೆಸುವ ವೇಳೆ ರಾಹುಲ್ ಗಾಂಧಿ ವಿರುದ್ಧ 'ದೈಹಿಕ ಹಲ್ಲೆ ಮತ್ತು ಪ್ರಚೋದನೆ'' ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ: ವಿವಿಧ ಹುದ್ದೆಗಳ ಸಂಚಿತ ವೇತನ ಪರಿಷ್ಕರಿಸಿ ಆದೇಶ|Order Revision of Accumulated Pay of Various Posts
''ಈ ಪ್ರಕರಣದ ಸಂಬಂಧ ದೆಹಲಿ ಕ್ರೈಬ್ರಾಂಚ್ ಪೊಲೀಸರು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದಾರೆ. ಪ್ರತ ತಂಡಗಳಲ್ಲಿ ಏಳು ಸದಸಸ್ಯರಿದ್ದು, ಸಹಾಯಕ ಪೊಲೀಸ್ ಆಯುಕ್ತ, ಇಬ್ಬರು ಇನ್ಸ್ಪೆಕ್ಟರ್ಗಳು ಮತ್ತು ಮೂವರು ಸಬ್ ಇನ್ಸ್ಪೆಕ್ಟರ್ಗಳು ಒಳಗೊಂಡಿದ್ದಾರೆ. ಈ ತಂಡಗಳು ವರದಿಯನ್ನು ನೇರವಾಗಿ ಪೊಲೀಸ್ ಉಪ ಆಯುಕ್ತರಿಗೆ ಸಲ್ಲಿಸುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ''.
ಈ ಪ್ರಕರಣದಲ್ಲಿ ಇಬ್ಬರು ಬಿಜೆಪಿ ಸಂಸದರಾದ ಪ್ರತಾಪ್ ಸಾರಂಗಿ ಮತ್ತು ಮುಖೇಶ್ ರಜಪೂತ್ ಅವರು ಸಂಸತ್ತಿನಲ್ಲಿ ನಡೆದ ಗದ್ದಲದಲ್ಲಿ ಗಾಯಗೊಂಡಿದ್ದರು. ಈ ಇಬ್ಬರನ್ನು ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಬ್ಬರ ಸಂಸದರ ಗಾಯಗಳಿಗೆ ರಾಹುಲ್ ಗಾಂಧಿಯೇ ನೇರ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಇತ್ತ ಗದ್ದಲಕ್ಕೆ ಕಾರಣ ಬಿಜೆಪಿಯೇ ಎಂದು ಆರೋಪಿಸಿರುವ ಕಾಂಗ್ರೆಸ್. ಬಿಜೆಪಿ ನಾಯಕರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ತಳ್ಳಿದ್ದಾರೆ. ಅವರ ಮೊಣ ಕಾಲಿಗೆ ಗಾಯವಾಗಿದೆ ಎಂದು ಆರೋಪಿಸಿದೆ. ಬಳಿಕ ಎರಡು ಪಕ್ಷ ನಾಯಕರು ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ನೀಡಿದ್ದಾರೆ,(ಏಜೆನ್ಸೀಸ್).