ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಬೆಂಗಳೂರಿನ ಪ್ರಮುಖ ವೃತ್ತ ರಿಚ್ಮಂಡ್ ಸರ್ಕಲ್ ಬಳಿ ಶನಿವಾರ(ನ. 01) ರಾತ್ರಿ ಹಲವು ಬೈಕ್ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿದ್ದು(Accident), ಘಟನೆಯಲ್ಲಿ ಗಂಡ-ಹೆಂಡತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ರಾತ್ರಿ 11 ಗಂಟೆ ಸುಮಾರಿಗೆ ರಿಚ್ಮಂಡ್ ವೃತ್ತದಲ್ಲಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಆಂಬ್ಯುಲೆನ್ಸ್ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಒಂದನ್ನು ಕೆಲವು ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿ ಹತ್ತಿರದ ಠಾಣೆಗೆ ಡಿಕ್ಕಿ ಹೊಡೆದು ನಿಲ್ಲಿಸಿತು ಎನ್ನಲಾಗಿದೆ.
ಇಸ್ಮಾಯಿಲ್(40), ಅವರ ಪತ್ನಿ ಸಮೀನ್ ಬಾನು ಸ್ಥಳದಲ್ಲೇ ಮೃತಪಟ್ಟ ದಂಪತಿ. ಇನ್ನಿಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಬ್ಯುಲೆನ್ಸ್ ಚಾಲಕ ಅಶೋಕ್ನನ್ನು ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)