ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ(America election) ಚುನಾವಣೆ ಇನ್ನೆರಡು ವಾರಗಳಲ್ಲಿ ನಡೆಯಲಿದೆ. ಈ ಚುನಾವಣೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿದ್ದು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಅಭ್ಯರ್ಥಿಯಾಗಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಬೆಂಬಲಿಸುವ ಎನ್‌ಜಿಒಗೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ಗೇಟ್ಸ್ ದೊಡ್ಡ ಮೊತ್ತವನ್ನು ದೇಣಿಗೆ ನೀಡಿದ್ದಾರೆ.
ಮುಂಬರುವ ಯುಎಸ್ ಚುನಾವಣೆಯಲ್ಲಿ ಯಾರನ್ನು ಬೆಂಬಲಿಸುತ್ತಾರೆ ಎಂಬುದನ್ನು ಬಿಲ್ ಗೇಟ್ಸ್ ಇನ್ನೂ ಸಾರ್ವಜನಿಕವಾಗಿ ಘೋಷಿಸಿಲ್ಲ. ಆದರೆ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದರೆ ಪರಿಸ್ಥಿತಿ ಏನಾಗಬಹುದು ಎಂಬ ಆತಂಕವನ್ನು ಅವರು ತಮ್ಮ ಆಪ್ತರಲ್ಲಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದರ ನಡುವೆ ಕಮಮಲಾ ಹ್ಯಾರಿಸ್‌ಗೆ ಬೆಂಬಲ ನೀಡುವ ಎನ್‌ಜಿಒ 'ಫ್ಯೂಚರ್ ಫಾರ್ವರ್ಡ್' ಸಂಸ್ಥೆಗೆ 50 ಮಿಲಿಯನ್ ಡಾಲರ್ (420 ಕೋಟಿರೂ.) ದೇಣಿಗೆ ನೀಡಲಾಗಿದೆ ಎಂದು ವರದಿಯಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಬಿಲ್ ಗೇಟ್ಸ್ ಈ ಚುನಾವಣೆ ತುಂಬಾ ವಿಭಿನ್ನವಾಗಿದೆ. ಆರೋಗ್ಯ ರಕ್ಷಣೆ ಸುಧಾರಿಸಲು, ಬಡತನವನ್ನು ಕಡಿಮೆ ಮಾಡಲು ಮತ್ತು ಪ್ರಪಂಚದಾದ್ಯಂತ ಯುದ್ಧದ ವಾತಾವರಣವನ್ನು ಬದಲಾಯಿಸಲು ಕೆಲಸ ಮಾಡುವವರನ್ನು ನಾನು ಬೆಂಬಲಿಸುತ್ತೇನೆ. ರಾಜಕಾರಣಿಗಳ ಜೊತೆ ಕೆಲಸ ಮಾಡಿದ ಅನುಭವ ನನಗಿದೆ. ಆದರೆ ಈ ಚುನಾವಣೆ ತುಂಬಾ ವಿಭಿನ್ನವಾಗಿದೆ ಎಂದು ತಿಳಿಸಿದ್ದಾರೆ.