ನವದೆಹಲಿ: ಮಹದೇವ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ದುಬೈನಲ್ಲಿ ಬಂಧಿಸಿದೆ.
ಬಂಧಿತನನ್ನು ಗುಜರಾತ್ ಮೂಲದ ಅಮಿತ್ ಮಜಿಥಿಯಾ ಎಂದು ಗುರತಿಸಲಾಗಿದೆ. ಬಂಧಿತ ಅಮಿತ್ ಮಜಿಥಿಯಾ ಸೌರಭ್ ಚಂದ್ರಕರ್ನ ನಿಕಟ ಸಹವರ್ತಿ ಎಂದು ಹೇಳಲಾಗಿದೆ. ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ದುಬೈನಿಂದ ಭಾರತಕ್ಕೆ ಗಡಿಪಾರು ಮಾಡುವ ನಿರೀಕ್ಷೆಯಿದೆ.
ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ನಾಯಿ ಬೋಬಿ ಇನ್ನಿಲ್ಲ
ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದಲ್ಲಿ ನಡೆದಿದ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಈತ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಹೇಳಲಾಗಿದೆ. ಇದಲ್ಲದೆ ಈತನ ವಿರುದ್ಧ ಭಾರತದ ವಿವಿಧ ರಾಜ್ಯಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತ ದುಬೈನಲ್ಲಿ ತಲೆಮಾರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಅಮಿತ್ ಮಜಿಥಿಯಾ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಒಡೆತನದ ಹೋಟೆಲ್ ಉದ್ಯಮದ ಪಾಲುದಾರರಾಗಿದ್ದಾರೆ ಎಂದು ವರದಿಯಾಗಿದೆ. ಕ್ರಿಪ್ಟೋ ಮತ್ತು ಡಿಜಿಟಲ್ ಕರೆನ್ಸಿ ಮೂಲಕ ವಹಿವಾಟು ನಡೆಸುತ್ತಿದ್ದರು. ಇದಲ್ಲದೆ ಮಜಿಥಿಯಾ CBTF ಹಾಗೂ ಶಂಕರ ಸ್ಪೋರ್ಟ್ಸ್ ನ್ಯೂಸ್ ಎಂಬ ಬೆಟ್ಟಿಂಗ್ ಆ್ಯಪ್ ಸಹ ನಡೆಸುತ್ತಿದ್ದ ಎಂದು ವರದಿಯಾಗಿದೆ. ಇದಕ್ಕೆ ಬಾಲಿವುಡ್ ಭಾರತ ಕ್ರಿಕೆಟ್ ತಂಡದ ಆಟಗಾರರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ.