Indian Army : ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ನೆಲೆಯ ಮೇಲೆ ಇಂದು (ಬುಧವಾರ, ಮೇ.7) ಕ್ಷಿಪಣಿ ದಾಳಿ ನಡೆಸಿದೆ. ಭಾರತದ ದಾಳಿಗೆ 80ಕ್ಕೂ ಹೆಚ್ಚು ಪಾಕ್ ಉಗ್ರರು ಮೃತಪಟ್ಟಿದ್ದಾರೆ.
ಈ ಘಟನೆ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅರೆಸೈನಿಕ ಪಡೆಗಳ ಮುಖ್ಯಸ್ಥರಿಗೆ ರಜೆಯಲ್ಲಿರುವ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ: ಭಾರೀ ಮುಖಭಂಗ ಸಹಿಸದೇ ಭಾರತದ ವಿರುದ್ಧ ಸುಳ್ಳು ಹರಡುತ್ತಿರುವ ಪಾಕ್ ಮಾಧ್ಯಮಗಳು! Operation Sindoor
ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಜಮ್ಮು ಮತ್ತು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವ ಶಾ, ಭಾರತ-ಪಾಕಿಸ್ತಾನ್ ಗಡಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.
ಇದರ ಜೊತೆಗೆ ತುರ್ತು ಸಂದರ್ಭಗಳಲ್ಲಿ ನಾಗರಿಕರ ಆಶ್ರಯಕ್ಕಾಗಿ ಬಂಕರ್‌ಗಳನ್ನು ಸಿದ್ದವಾಗಿಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಗೃಹ ಸಚಿವರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. (ಏಜೆನ್ಸೀಸ್)