ನ್ಯೂಸ್

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿ ಮುರ್ಮು ಜತೆ ಅಮಿತ್​ಶಾ ಚರ್ಚೆ| Amith shah

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ಬಳಿಕ ಅಮಿತ್​ಶಾ ಸಹ ಮುರ್ಮು ಜೊತೆ ಚರ್ಚಿಸಿದ್ದಾರೆ.

ನವದೆಹಲಿ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಆ.03) ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿದರು ಎಂದು ರಾಷ್ಟ್ರಪತಿ ಭವನ 'X' ನಲ್ಲಿ ಬರೆದಿದೆ. ಆದರೆ ಪ್ರಧಾನಿ ಮತ್ತು ಗೃಹ ಸಚಿವರು ರಾಷ್ಟ್ರಪತಿಗಳೊಂದಿಗಿನ ಸಭೆಗಳ ಹಿಂದಿನ ಕಾರಣಗಳನ್ನು ಮಾತ್ರ ಸ್ಪಷ್ಟಪಡಿಸಿಲ್ಲ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯಿಂದಾಗಿ  ಸಂಸತ್ತಿನಲ್ಲಿ ಗದ್ದಲ ನಡೆದ ಹಿನ್ನೆಲೆಯಲ್ಲಿ ಈ ಸಭೆಗಳು ನಡೆದಿವೆ .

ನವದೆಹಲಿ ರಷ್ಯಾದ ಮಿಲಿಟರಿ ಉಪಕರಣಗಳು ಮತ್ತು ತೈಲವನ್ನು ಖರೀದಿಸಿದ್ದಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ರಫ್ತಿನ ಮೇಲೆ ಶೇಕಡಾ 25 ರಷ್ಟು ಸುಂಕ ಮತ್ತು ಅನಿರ್ದಿಷ್ಟದಂಡವನ್ನು ಘೋಷಿಸಿದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ.

(ಏಜೆನ್ಸೀಸ್)