ನ್ಯೂಸ್

ಚಂದ್ರಬಾಬು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತಮಿಳಿಸೈ ಬಗ್ಗೆ ಅಮಿತ್ ಶಾ ಸೀರಿಯಸ್​!

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾರಾ ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಚಂದ್ರಬಾಬು ಪ್ರಮಾಣ ವಚನ ಸ್ವೀಕಾರಕ್ಕೆ ಕೆಲವೇ ನಿಮಿಷಗಳ ಮೊದಲು ಅದೇ ವೇದಿಕೆಯಲ್ಲಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಸಂದರ್ಭದಲ್ಲಿ ಗಂಭೀರವಾಗಿ ಕಾಣಿಸಿಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ವೀಡಿಯೊಗಳು ಮತ್ತು ಫೋಟೋಗಳು ಮುಖ್ಯವಾಹಿನಿಯ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಗಿದೆ.

ತೆಲಂಗಾಣ ಮಾಜಿ ರಾಜ್ಯಪಾಲ ತಮಿಳಿಸೈ ಕೂಡ ಚಂದ್ರಬಾಬು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು ಎಂಬುದು ವಿಶೇಷ. ವೇದಿಕೆಗೆ ಬಂದು ಕೇಂದ್ರದ ಹಿರಿಯರಿಗೆ ನಮಸ್ಕರಿಸಿ ತನ್ನ ಆಸನದ ಕಡೆಗೆ ಹೋದರು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳಿಸೈ ಅವರನ್ನು ವಾಪಸ್ ಕರೆಸಿ ಸೀರಿಯಸ್​ ಆಗಿ ಮಾತನಾಡಿದರು. ಇದು ನೆರೆದವರ್ಲ್ಲಿ ಗಂಭೀರ ಚರ್ಚೆಗೆ ಕಾರಣವಾಯಿತು.