ನ್ಯೂಸ್

ಹ್ಯಾಟ್ರಿಕ್​ ಹೀರೋ ಶಿವಣ್ಣನ ಮನೆಯಲ್ಲಿ ಮಹತ್ವದ ಸಭೆ; ಸ್ಯಾಂಡಲ್‌ವುಡ್‌ನ ಪ್ರಮುಖರೊಂದಿಗೆ ಚರ್ಚಿಸಿದ್ದೇನು? Secret-meeting

ಬೆಂಗಳೂರು: ಇಂದು (17) ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ ಎಂದು ಹೇಳಲಾಗುತ್ತಿದೆ. ದಿಢೀರನೆ ಇಂದು ಶಿವಣ್ಣನ ನಿವಾಸದಲ್ಲಿ ನಡೆದ ಈ ಮೀಟಿಂಗ್‌ನಲ್ಲಿ ಸ್ಯಾಂಡಲ್‌ವುಡ್‌ ಸೇರಿದಂತೆ ಹಲವು ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಈ ಸಭೆಯು ದೊಡ್ಮನೆಯ ಶಿವರಾಜ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಭೆಯಲ್ಲಿ ನಟ ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ಧ್ರುವ ಸರ್ಜಾ ಸೇರಿದಂತೆ ಹಲವು ನಟರು, ಸಿನಿಮಾ ನಿರ್ಮಾಪಕರು, ಪ್ರದರ್ಶಕರು ಹಾಗೂ ವಿತರಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಸಭೆಯಲ್ಲಿ ಸೇರಿದ ಎಲ್ಲರೂ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಈಗ ಎದುರಾಗಿರುವ ಗಂಭೀರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಾರೆ.

ಸಭೆಯಲ್ಲಿ ಚರ್ಚಿಸಿದ್ದೇನು?

(ಏಜೆನ್ಸೀಸ್)

ಸ್ಟಾರ್ ಸಿನಿಮಾಗಳಿಂದ ಥಿಯೇಟರ್​ಗಳು ಉಳಿಯುತ್ತವೆ. ಹೀಗಾಗಿ ಸ್ಟಾರ್​ಗಳು ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಬೇಕು. ಥಿಯೇಟರ್​ಗಳಿಗೆ ಜನ ಬರುತ್ತಿಲ್ಲ, ಇದು ದೊಡ್ಡ ಸಮಸ್ಯೆ ಆಗಿದೆ. ಥಿಯೇಟರ್​ಗಳಿಗೆ ಲ್ಯಾಂಡ್ ಟ್ಯಾಕ್ಸ್, ಸಬ್ಸಿಡಿ, ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವಂತೆ ಸಿಎಂ ಬಳಿ ಮಾತನಾಡುವುದಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಸಭೆಯಲ್ಲಿ ಹೀರೋಗಳು ಐದು ವರ್ಷಕ್ಕೆ ಒಂದು ಸಿನಿಮಾ ಮಾಡುವ ಬದಲು, ವರ್ಷಕ್ಕೆ ಎರಡು ಸಿನಿಮಾಗಳು ಮಾಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ಥಿಯೇಟರ್ ಮುಚ್ಚುತ್ತಿರೋದರ ಕುರಿತು ಬಹುಮುಖ್ಯವಾಗಿ ಚರ್ಚೆ ನಡೆಸಲಾಗಿದೆ.