ನ್ಯೂಸ್

ನಮ್ಮ ಎದೆ ಬಗೆದರೆ ರಾಮ, ಸಿದ್ದರಾಮಯ್ಯ ಕಾಣ್ತಾರೆ; ಶಾಸಕ ಪ್ರದೀಪ್​ ಈಶ್ವರ್

ಬೆಂಗಳೂರು: ನಮ್ಮ ಎದೆ ಬಗೆದರೆ 'ರಾಮ'ನೂ ಕಾಣ್ತಾನೆ, ಸಿದ್ದರಾಮಯ್ಯನೂ ಕಾಣ್ತಾರೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರದೀಪ್ ಈಶ್ವರ್ ನಾಲಗೆ ಹಿಡಿತದಲ್ಲಿರಲಿ ಎಂದು ಎಚ್ಚರಿಕೆ ನೀಡಿದರು.

ಪ್ರಚೋದನೆಯಿಂದ ಹೆಚ್ಚು ಕಡಿಮೆ ಆದರೆ ಹೆಗಡೆ ಬರ್ತಾರ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಒಳಗೆ ಹಾಕಬೇಕು. ನಾವೂ ಹಿಂದೂ ಧರ್ಮದವರೇ. ನಮಗೂ ಶ್ರೀರಾಮನ ಮೇಲೆ ನಂಬಿಕೆ ಇದೆ. ಹೆಗಡೆಯವರೇ ನಮ್ಮ ಎದೆ ಬಗೆದರೆ ರಾಮ, ಸಿದ್ದರಾಮಯ್ಯನೂ, ಡಾ.ಅಂಬೇಡ್ಕರ್​​, ಸಿದ್ದಗಂಗಾ ಶ್ರೀಗಳು ಸಹ ಕಾಣುತ್ತಾರೆ.

ಅನಂತಕುಮಾರ್ ಹೆಗ್ಡೆ ನಿಮ್ಮ ನಾಲಗೆ ಹಿಡಿತದಲ್ಲಿರಲಿ. ಹಿಂದೂ ಧರ್ಮ ನಿಮ್ಮ ಅಪ್ಪನ ಮನೆ ಸ್ವತ್ತಾ. ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿ ತರ ಆಡುತ್ತಿದ್ದೀರಲ್ಲ, ನಾಲಗೆ ಕಂಟ್ರೋಲ್​ನಲ್ಲಿ ಇಟ್ಟುಕೊಳ್ಳಿ ಹೆಗಡೆಯವರೇ ಎಂದು ಎಚ್ಚರಿಕೆ ನೀಡಿದರು.

ನೀವು ಒಂದು ಮಾತಾಡಿದರೆ ನಾವು ನಾಲ್ಕು ಮಾತಾಡುತ್ತೇವೆ. ಬನ್ನಿ ಈ ಫೈಟ್ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡೋಣ. ಬಿಜೆಪಿಯಲ್ಲಿ ಟಿಕೆಟ್ ಸಿಗಲ್ಲ ಎನ್ನೋದು ಗೊತ್ತಾಗಿದೆ. ಇವರ ಬಾಯಿ ಚಪಲದಿಂದ ಹಿಂದೆ ಮಂತ್ರಿಗಿರಿ ಕಳೆದುಕೊಂಡರು. ಬಾಯಿಗೆ ಬಂದಂತೆ ಮಾತಾಡುತ್ತಿದ್ದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ ಎಂದು ವಾಗ್ದಾಳಿ ನಡೆಸಿದರು.

ಅನಂತಕುಮಾರ್ ಹಗಡೆ ಅವರು ಹೇಳಿದ್ದು: ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಅಂತ ಬೇಕಾದರೂ ತಿಳಿಯಿರಿ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಸಿರಸಿಯ ಸಿಪಿ ಬಜಾರ್​​ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ತಾನ ಕಾಣುತ್ತದೆ ಎಂದು ಅನಂತಕುಮಾರ್ ಹೇಳಿದ್ದರು.

ಶತಮಾನಗಳಿಂದಲೂ ಹಿಂದೂ ಸಮಾಜವನ್ನು ಒಡೆಯುತ್ತಲೆ ಬರುತ್ತದ್ದಾರೆ. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ. ಅದು ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿಎಂ ಸಿದ್ದರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ಮತಕ್ಕಾಗಿ ಹರಾಜಾಗಿ ಹೊದವರು ನಮ್ಮ ವಿರೋಧಿಗಳು ಎಂದು ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದರು.