ಬೆಂಗಳೂರು: ಅನ್ನಭಾಗ್ಯ ಅಕ್ಕಿ ಟೆನ್ಷನ್ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಸರ್ಕಸ್‌ನಲ್ಲಿರುವ ಸರ್ಕಾರಕ್ಕೆ ಮತ್ತೊಂದು ಸವಾಲು ಎದುರಾಗಿದ್ದು ಇದೀಗ ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಇಳಿದಿದ್ದಾರೆ.
ಶೀಘ್ರವಾಗಿ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸುತ್ತಿರುವ ಕಾರ್ಯಕರ್ತೆಯರು ಇಂದು (ಜೂ.27) ಹೋರಾಟಕ್ಕೆ ಧುಮುಕುವುದಾಗಿ ನಿರ್ಧರಿಸಿದಂತಿದೆ. ಇಂದು ಬೆಳಗ್ಗೆ 11ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಶುರುವಾಗಲಿದೆ ಎನ್ನಲಾಗಿದೆ.
ಸರ್ಕಾರ ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಹೇಳಿತ್ತು. ಅದಲ್ಲದೇ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರು ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿದ್ದ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರ ಫೆಡರೇಶನ್ (AITUC) ನಿಂದ ಹೋರಾಟ ನಡೆಯುತ್ತಿದ್ದು ಕಾರ್ಯಕರ್ತೆಯರ, ಸಹಾಯಕಿಯರ ಬೇಡಿಕೆಗಳು ಹೀಗಿದೆ: