ಕುಷ್ಟಗಿಯ ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾವಿ ಮಾತನಾಡಿದರು. ತಾಪಂ ಇಒ ಶಿವಪ್ಪ ಸುಬೇದಾರ್ ಇದ್ದರು. 
ನ್ಯೂಸ್

ಅಂಗನವಾಡಿ ಕೇಂದ್ರಗಳ ಕಾಮಗಾರಿ ಪೂರ್ಣಗೊಳಿಸಿ

Kopala - Desk - Eraveni

ಕುಷ್ಟಗಿ:ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾವಿ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ:http://ಅಂಗನವಾಡಿ ಕೇಂದ್ರಗಳ ಕಾಮಗಾರಿ ಪೂರ್ಣಗೊಳಿಸಿ
ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಕೇಂದ್ರಗಳಿಗೆ ನಿವೇಶನ ಒದಗಿಸುವ ಕಾರ್ಯವನ್ನು ಆಯಾ ಪಂಚಾಯಿತಿ ಅಧಿಕಾರಿಗಳು ಮಾಡಬೇಕು ಎಂದರು.

ಬಿಜಕಲ್ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಬಗ್ಗೆ ಮಾಹಿತಿ ಬಂದಿದೆ. ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

ಪಶು ಚಿಕಿತ್ಸಾ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಸಂಬಂಧ ಮೇಲಧಿಕಾರಿಗಳಿಗೆ ಪತ್ರ ಬರೆಯುವಂತೆ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಆನಂದ್‌ಗೆ ತಿಳಿಸಿದರು. ಸಭೆಗೆ ಗೈರಾಗಿದ್ದ ಆಹಾರ ಇಲಾಖೆ ಶಿರಸ್ತೇದಾರ್‌ಗೆ ನೋಟೀಸ್ ಜಾರಿ ಮಾಡುವಂತೆ ತಾಪಂ ಇಒಗೆ ಸೂಚಿಸಿದರು.

ಅಕ್ಕಿ ಹುರಿದು ಪಲಾವ್ ಮಾಡಿ
ಶಾಲೆಗಳಲ್ಲಿ ಬಿಸಿಯೂಟಕ್ಕೆ ಹುರಿದ ಅಕ್ಕಿಯಿಂದ ಪಲಾವ್ ತಯಾರಿಸಿ. ಇದಕ್ಕೆ ಅಡುಗೆ ಸಿಬ್ಬಂದಿಗೆ ತರಬೇತಿ ನೀಡಿ. ತರಬೇತಿ ವೇಳೆ ಪಾಲ್ಗೊಳ್ಳುವುದಾಗಿ ಅಕ್ಷರ ದಾಸೋಹ ಅಧಿಕಾರಿ ಕೆ.ಶರಣಪ್ಪಗೆ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತಿಳಿಸಿದರು. ತಾಪಂ ಇಒ ಶಿವಪ್ಪ ಸುಬೇದಾರ್, ತಾಲೂಕು ಆರೋಗ್ಯಾಧಿಕಾರಿ ಆನಂದ್ ಗೋಟೂರು, ನರೇಗಾ ಸಹಾಯಕ ನಿರ್ದೇಶಕ ನಿಂಗನಗೌಡ ಹಿರೇಹಾಳ ಇದ್ದರು.
25ಕೆಎಸ್‌ಟಿ-1
ಕುಷ್ಟಗಿಯ ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾವಿ ಮಾತನಾಡಿದರು. ತಾಪಂ ಇಒ ಶಿವಪ್ಪ ಸುಬೇದಾರ್ ಇದ್ದರು.