ಬೆಂಗಳೂರು: ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಅವರು ಕೆಂಪೇಗೌಡ ಏರ್ಪೋರ್ಟ್ನಿಂದ ಬೆಂಗಳೂರಿಗೆ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅನಿಲ್ ಕುಂಬ್ಳೆ ಅವರಿಗೂ ಬಂದ್ ಬಿಸಿ ತಟ್ಟಿದ್ದು, ಏರ್‌ಪೋರ್ಟ್ ಟ್ಯಾಕ್ಸಿ ಇಲ್ಲದೇ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ಮನೆಗೆ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಕುರಿತಾಗಿ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇಂದು ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್ ಮೂಲಕವಾಗಿ ಮನೆಗೆ ಪ್ರಯಾಣಿಸಿದೆ ಎಂದು ಬರೆದುಕೊಂಡು ಬಸ್ನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಟ್ವೀಟ್ ಮಾಡಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ಅನಿಲ್ ಕುಂಬ್ಳೆ ಅವರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.