ನ್ಯೂಸ್

ಬೀದಿ ನಾಯಿಗಳ ಸರ್ವೇ ಶೀಘ್ರ ಆರಂಭಿಸಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿ- ಧಾರವಾಡ ಅವಳಿನಗರಗಳಲ್ಲಿ ಬೀದಿ ನಾಯಿಗಳ ಸಮೀಕ್ಷಾ ಕಾರ್ಯವನ್ನು 15 ದಿನದೊಳಗಾಗಿ ಆರಂಭಿಸಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಅಽಕಾರಿಗಳಿಗೆ ಸೂಚಿಸಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಾಣಿ ಸಂತಾನ ನಿಯಂತ್ರಣ ಮೇಲ್ವಿಚಾರಣೆ ಮತ್ತು ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೀದಿನಾಯಿಗಳ ಸಮೀಕ್ಷೆಯು ಸರ್ಕಾರೇತರ ಸಂಘ- ಸಂಸ್ಥೆಗಳ ಮೂಲಕ ಅವೈಜ್ಞಾನಿಕವಾಗಿ ನಡೆಯುತ್ತಿದೆ. ಸಾರ್ವಜನಿಕರ ಹಾಗೂ ಪ್ರಾಣಿಗಳ ಸುರಕ್ಷತೆ ದೃಷ್ಟಿಯಿಂದ ಪ್ರಾಮಾಣಿತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಪ್ರಕಾರ ನುರಿತ ತಜ್ಞರಿಂದ ಸಮೀಕ್ಷೆ ಕೈಗೊಳ್ಳಬೇಕು ಎಂದರು.
2018ರ ಸಮೀಕ್ಷೆ ಪ್ರಕಾರ ಅವಳಿನಗರದಲ್ಲಿ 26,000 ಹಾಗೂ ಜಿಲ್ಲೆಯಾದ್ಯಂತ 50,000 ಬೀದಿ ನಾಯಿಗಳು ಇರಬಹುದು ಎಂದು ಅಽಕಾರಿಗಳು ಸಭೆಯ ಗಮನಕ್ಕೆ ತಂದರು.
ಪಾಲಿಕೆಯಿAದ ನಾಯಿಗಳ ಸವೇ ಹಾಗೂ ಸಂತಾನ ಚಿಕಿತ್ಸೆಗೆ ಅಗತ್ಯ ವೈಜ್ಞಾನಿಕ ಪದ್ಧತಿಯ ವಿವರಗಳನ್ನು ಟೆಂಡರ್‌ನಲ್ಲಿ ನಮೂದಿಸಬೇಕು. ಸಂಘ- ಸಂಸ್ಥೆಗಳ ಹಾಗೂ ತಜ್ಞರ ಜೊತೆ ಚರ್ಚಿಸಿ ವರ್ಷದೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು. ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ಸೂಚಿಸಿದ ರೀತಿಯಲ್ಲಿ ನಾಯಿಗಳ ಗಣತಿಯನ್ನು ನಡೆಸಬೇಕು. ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲು ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕ ಮೂಲ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಬಿಡಾಡಿ ದನಗಳನ್ನು ಗೋಶಾಲೆಗೆ ಸೇರಿಸಬೇಕು. ಮಾಲೀಕರಿಗೆ ದಂಡ ವಿಽಸುವ ಕ್ರಮದ ಅರಿವು ಮೂಡಿಸಬೇಕು ಎಂದರು.
ಪಾಲಿಕೆಯ ಮುಖ್ಯ ಪಶು ವೈದ್ಯಾಽಕಾರಿ ಡಾ. ಎ.ಜಿ. ಕುಲಕರ್ಣಿ, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಡಾ. ರವಿ ಸಾಲಿಗೌಡರ, ಹುಮೇನ್ ಸೊಸೈಟಿ ಇಂಟರ್‌ನ್ಯಾಷನಲ್ ಇಂಡಿಯಾದ ಡಾ. ಮುಕೇಶ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ವಾರ್ಡನ್ ಡಾ. ಹೇಮಂತ್, ಜಿ.ಪಂ. ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಎಸಿಎಫ್ ಪರಿಮಳಾ, ಇತರರಿದ್ದರು.ಉಪಸ್ಥಿತರಿದ್ದರು.