ನ್ಯೂಸ್

ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಪ್ರಕರಣ ಬಯಲು

Webdesk - Narayanaswamy

ಬೆಳಗಾವಿ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಪ್ರಕರಣ ಬಯಲಾಗಿದ್ದು ತಂದೆ ಬಾವಾಸಾಹೇಬ್ ಕೊಂಡುನಾಯ್ಕ ಮೇಲೆಯೂ ಹಲ್ಲೆ ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಸ್ವಂತ ತಂದೆಯ ಮೇಲೆ ಹಲ್ಲೆ ಮಾಡಿರುವ ಈತ ಅತಿಂತ ಹಂತಕನಲ್ಲ ಆಸ್ತಿ ವಿಚಾರಕ್ಕೆ ಮೂರು ತಿಂಗಳ ಹಿಂದೆ ಶಿಕ್ಷಕರಾಗಿದ್ದ ತನ್ನ ತಂದೆಯ ಮೇಲೆಯೇ ಹಲ್ಲೆ ಮಾಡಿದ್ದ ಎನ್ನಲಾಗಿದೆ.

ಮಗನ ದುಷ್ಕೃತ್ಯದಿಂದ ಮನನೊಂದಿದ್ದ ತಂದೆ ಸವದತ್ತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಅಷ್ಟೇ ಅಲ್ಲ, ಮಗನಿಂದ ರಕ್ಷಣೆ ಕೊಡಿಸಿ ಎಂದು ಮನವಿ ಮಾಡಿದ್ದರು ಬಳಿಕ ಫಯಾಜ್‌ನನ್ನು ಠಾಣೆಗೆ ಕರೆಯಿಸಿಕೊಂಡು ಪೊಲೀಸರು ಬುದ್ದಿವಾದ ಹೇಳಿ ಮುಚ್ಚಳಿಕೆ ಬರೆಯಿಸಿಕೊಂಡು, ಮತ್ತೆನಾದರೂ ತಂದೆ ಮೇಲೆ ಹಲ್ಲೆ ಮಾಡಿದರೆ ಜೈಲಿಗೆ ಕಳುಹಿಸುವುದಾಗಿ ಎಚರಿಕೆ ನೀಡಿ ಕಳೂಹಿಸಿದ್ದರು ಎಂದು ತಿಳಿದುಬಂದಿದೆ.