ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೋಟುಗಳಲ್ಲಿ ಲಕ್ಷ್ಮೀ, ಗಣೇಶನ ಚಿತ್ರ ಮುದ್ರಿಸಬೇಕು ಎಂದು ಒತ್ತಾಯಿಸಿದ್ದರು. ಇದೀಗ ಈ ವಿಚಾರದ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರ ಅರಾಜಕತೆಯ ಸಂಕೇತವಿದ್ದಂತೆ. ಎಎಪಿಯ ಭ್ರಷ್ಟಾಚಾರದ ಬಗ್ಗೆ ಚರ್ಚೆ ನಡೆಯಬಾರದು. ಇದಕ್ಕಾಗಿ ಕೇಜ್ರಿವಾಲ್ ಚರ್ಚೆಗೆ ಆಸ್ಪದ ಕೊಡುವಂತಹ ಮಾತುಗಳನ್ನಾಡುತ್ತಿದ್ದಾರೆ. ಇದು ಪ್ರಚಾರದ ಹೊಸ ತಂತ್ರ ಎಂದು ಟೀಕಿಸಿದ್ದಾರೆ.
ಇಷ್ಟೆಲ್ಲಾ ಮಾತನಾಡುವ ಕೇಜ್ರಿವಾಲ್ ದೆಹಲಿಯಲ್ಲಿ ಮುಸ್ಲಿಂ ಧರ್ಮಗುರುಗಳಿಗೆ ವಾರ್ಷಿಕ 18 ಸಾವಿರ ರೂ. ನೀಡುತ್ತಿದ್ದಾರೆ. ಇದೇ ತರಹ ಪುರೋಹಿತರು, ಗುರುದ್ವಾರ ಗ್ರಂಥಿಗಳು, ಪಾದ್ರಿಗಳಿಗೆ ನೀಡಲು ಯಾಕೆ ಕೇಜ್ರಿವಾಲ್ಗೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. (ಏಜೆನ್ಸೀಸ್)