ಬನ್ನಡ್ಕ ಅಪಘಾತ ವಲಯವಾಗಿರುವ ಹಿನ್ನೆಲೆಯಲ್ಲಿ ಸಂಸದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಲಾಯಿತು. ಸ್ಥಳೀಯ ಪ್ರಮುಖರಾದ ಸೂರಜ್ ಜೈನ್ ಮಾರ್ನಾಡು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಪ್ರೀತಮ್ ಮಾರ್ನಾಡು, ಪ್ರವೀಣ್ ಭಂಡಾರಿ, ರವಿರಾಜ್ ಪುತ್ತೂರು ಉಪಸ್ಥಿತರಿದ್ದರು.
- ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸೂಚನೆ
- ಸರ್ವೀಸ್ ರಸ್ತೆ ನಿರ್ಮಾಣದ ಅಗತ್ಯ
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಪ್ರದೇಶದಲ್ಲಿ ಪದೇ ಪದೆ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ತಡೆಗೆ ಸಂಬಂಧಿಸಿದಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಮಕ್ಷಮದಲ್ಲಿ ಮಂಗಳವಾರ ಸಂಜೆ ಮಹತ್ವದ ಸಭೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಕಂಪನಿ ಪ್ರಮುಖರು ಭಾಗವಹಿಸಿದ್ದರು.
ಬನ್ನಡ್ಕ ಭಾಗದಲ್ಲಿ ಅಪಘಾತಗಳು ಸಂಭವಿಸಲು ಕಾರಣವಾದ ತಾಂತ್ರಿಕ ಅಂಶಗಳ ಕುರಿತು ಸ್ಥಳೀಯ ಪ್ರಮುಖರೊಂದಿಗೆ ಚರ್ಚಿಸಿದ ಸಂಸದರು ಕೂಡಲೇ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಸರ್ವೀಸ್ ರಸ್ತೆ ನಿರ್ಮಾಣದ ಅಗತ್ಯವಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಥಳೀಯ ಪ್ರಮುಖರಾದ ಸೂರಜ್ ಜೈನ್ ಮಾರ್ನಾಡು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಪ್ರೀತಮ್ ಮಾರ್ನಾಡು, ಪ್ರವೀಣ್ ಭಂಡಾರಿ, ರವಿರಾಜ್ ಪುತ್ತೂರು ಉಪಸ್ಥಿತರಿದ್ದರು.