ಶಿವಮೊಗ್ಗ: ನಗರದ ರೋಟರಿ ಪೂರ್ವ ಚಿತಾಗಾರದ ಸುತ್ತಮುತ್ತಲ ಭಾಗದಲ್ಲಿ ಪುಂಡರ ಹಾವಳಿ ಹೆಚ್ಚಿದೆ. ಇಲ್ಲಿ ರಾತ್ರಿ ವೇಳೆ ಗಾಂಜಾ ಸೇವಿಸುವ ಪುಂಡರಿಂದಾಗಿ ಸಾರ್ವಜನಿಕರು ನೆಮ್ಮದಿಯಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಇವರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ರೋಟರಿ ಚಿತಾಗಾರ ಟ್ರಸ್ಟ್‌ನ ಪ್ರಮುಖರು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ರೋಟರಿ ಪೂರ್ವ ಚಿತಾಗಾರದ ಪಕ್ಕದ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಿಡಿಗೇಡಿ ಹುಡುಗರು ಮನೆಯ ಕಿಟಕಿ ಗಾಜುಗಳನ್ನು ಒಡೆದು ಹಾಕುತ್ತಿದ್ದಾರೆ. ಮನೆ ಎದುರಿನ ನಲ್ಲಿಗಳನ್ನು ಕಿತ್ತು ಹಾಕುತ್ತಿದ್ದಾರೆ. ನಿರ್ಮಾಣ ಹಂತದಲ್ಲಿರುವ ಮನೆಗಳ ಕಿಟಕಿ, ಬಾಗಿಲುಗಳನ್ನೇ ಕದ್ದೊಯ್ಯುತ್ತಿದ್ದಾರೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ರೋಟರಿ ಚಿತಾಗಾರ ಟ್ರಸ್ಟ್‌ನ ಪ್ರಭಾರ ಮ್ಯಾನೇಜಿಂಗ್ ಟ್ರಸ್ಟಿ ಡಾ.ಪರಮೇಶ್ವರ ಡಿ.ಶಿಗ್ಗಾಂವ್, ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಡಾ. ಕಡಿದಾಳ್ ಗೋಪಾಲ್, ಉಪಾಧ್ಯಕ್ಷ ಸುರೇಶ್ ಕುಮಾರ್, ಖಜಾಂಚಿ ಜಿ.ವಿಜಯ್‌ಕುಮಾರ್ ಇದ್ದರು.