ಡಿಪ್ಲಮಾ ಕೋರ್ಸು ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  
ನ್ಯೂಸ್

ಡಿಪ್ಲಮಾ ಕೋರ್ಸ್‌ಗೆ ಅರ್ಜಿ ಆಹ್ವಾನ

Shravan Kumar Nala
ಮಂಗಳೂರು: 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ಮಂಗಳೂರು ಇಲ್ಲಿ ಡಿಪ್ಲಮಾ ಕೋರ್ಸ್‌ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲಮಾ ಕೋರ್ಸು ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಮೇ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಕಚೇರಿಯಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.