ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ  
ನ್ಯೂಸ್

ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ

ಮೈಸೂರು ದಸರಾ ಉತ್ಸವ-2026

ಬೆಂಗಳೂರು : ವಿಶ್ವ ಪ್ರಸಿದ್ಧ ಮೈಸೂರು ದಸರಾ ಉತ್ಸವ-2026ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಅ.11 ರಿಂದ 20 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026ನ್ನು ಏರ್ಪಡಿಸಲಾಗಿದೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ನಡೆಯಲಿರುವ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ಒಂದು ಸಾವಿರ ರೂ. ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು. ಪ್ರಧಾನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ಮೂಲಕ ಪಡೆದುಕೊಳ್ಳಬಹುದು.

ಭರ್ತಿಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅ.5 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ನೊಂದಾಯಿತ ಅಂಚೆ ಅಥವಾ ನೇರವಾಗಿ ಬಂದು ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002, ದೂ: 080-22484516 ಸಂಪರ್ಕಿಸಬಹುದು.