ನ್ಯೂಸ್

ಬಿಒಬಿಯಲ್ಲಿ ಬಿಜಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಹೀಗಿರಲಿದೆ

sspmiracle1982

ನವದೆಹಲಿ: ಬ್ಯಾಂಕ್ ಆಫ್ ಬರೋಡಾ ಬಿಜಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ವಿವಿಧ ಜಿಲ್ಲೆಗಳಲ್ಲಿ ಒಟ್ಟು 49 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಕಂಪ್ಯೂಟರ್ (ಎಂ ಎಸ್ ಆಫೀಸ್, ಇ-ಮೇಲ್, ಇಂಟರ್ನೆಟ್) ಜ್ಞಾನವನ್ನು ಹೊಂದಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 31 ರೊಳಗೆ ಅರ್ಜಿ ಸಲ್ಲಿಸಬಹುದು.  ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ https://www.bankofbaroda.in/ ನೋಡಬಹುದು.