ಉಡುಪಿ: ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಂತಾಪ ಸೂಚಿಸಿದ್ದಾರೆ.
ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ನಿಧರಾಗಿದ್ದು, ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸುಬ್ರಮಣ್ಯಸ್ವಾಮಿ, ಘಟನೆಯಿಂದ ನನಗೆ ಶಾಕ್ ಆಗಿದೆ. ಈ ಪ್ರಕರಣದ ಬಗ್ಗೆ ಗಂಭೀರ ತನಿಖೆ ಆಗಬೇಕಿದೆ. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಹಿರಿಯ ಸುಪ್ರೀಂಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು. ಈ ಬಗ್ಗೆ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.
ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆಯಾಗಿದೆ. ಈಗ ತಾನೆ ಘಟನೆ ನಡೆದಿರುವುದರಿಂದ ಹೆಚ್ಚಿನ ಮಾಹಿತಿ ನನ್ನಲ್ಲಿ ಇಲ್ಲ ಎಂದು ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದರು.