ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ನಂಬರ್ಗೆ ಕರೆ ಮಾಡಿ ವಿಧಾನಸೌಧಕ್ಕೆ ಬಾಂಬ್ ಇಡಲಾಗಿದೆ ಎಂದು ಬೆದರಿಸಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೇಂದ್ರ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ವಿಧಾನ ಸೌಧಕ್ಕೆ ಕರೆ ಮಾಡಿ ಬಾಂಬ್ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಬ್ಲ್ಯಾಸ್ಟ್ ಆಗುತ್ತದೆ ಎಂದು ಮೂರು ಬಾರಿ ಕಡೆ ಮಾಡಿ ಬೆದರಿಸಿದ್ದ. ಕೂಡಲೇ ಎಚ್ಚೆತ್ತ ಕಚೇರಿ ಸಿಬ್ಬಂದಿ ವಿಧಾನ ಸೌಧದ ಠಾಣೆಗೆ ಮಾಹಿತಿ ನೀಡಿದ್ದಾರೆ. ನಂತರ ಬಾಂಬ್ ನಿಷ್ಕ್ರೀಯ ದಳವನ್ನ ಬಂದು ಪರಿಶೀಲಿಸಿದೆ. ಈ ವೇಳೆ ಇದೊಂದು ಹುಸಿ ಬಾಂಬ್ ಕರೆ ಎಂಬುವುದು ತಿಳಿದಿದೆ.
ಮಾಹಿತಿ ಸಂಬಂಧ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.