ನ್ಯೂಸ್

ಬಂಡೇಮಠದ ಶ್ರೀಗಳ ಪ್ರಕರಣ; ಕಣ್ಣೂರು ಮಠದ ಸ್ವಾಮೀಜಿ ಸಹಿತ ಮೂವರ ಬಂಧನ

ರಾಮನಗರ: ಬಂಡೇಮಠದ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಗಡಿಯ ಕಣ್ಣೂರು ಮಠದ ಸ್ವಾಮೀಜಿ, ನಿವೃತ್ತ ಶಿಕ್ಷಕ ಹಾಗೂ ದೊಡ್ಡ ಬಳ್ಳಾಪುರ ಮೂಲದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ವೈಯಕ್ತಿಕ ದ್ವೇಷ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ಸ್ವಾಮೀಜಿ ಸಿದ್ದಗಂಗಾ ಮಠಕ್ಕೆ ಹತ್ತಿರವಾಗುತ್ತಿದ್ದಾರೆ ಎಂದು ಕಳಂಕ ತರಲು ಹನಿಟ್ರ್ಯಾಪ್ ಮಾಡಿರುವ ಸಾಧ್ಯತೆ ಇದೆಯೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಂಧಿತ ಮೂವರನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿ, ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಿದ್ದಾರೆ. ನಂತರ ನ್ಯಾಯಾಲಕ್ಕೆ ಹಾಜರುಪಡಿಸಿ, ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಕರೆತಂದಿದ್ದಾರೆ.