ಬೆಂಗಳೂರು:ಇಲ್ಲಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ(Cattle Cruelty Case) ಅತ್ಯಂತ ಖಂಡನೀಯವಾಗಿದ್ದು,ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಬೇಕು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.
ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದರು.
ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದುಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದು ಕಿಡಿಕಾರಿದರು.
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವೇಳೆ ಕರಸೇವಕರ ಮೇಲಿನ 30 ವರ್ಷದ ಹಳೇ ಕೇಸುಗಳು ರೀ ಓಪನ್ ಆಗುತ್ತವೆ. ಗಣೇಶ ಹಬ್ಬದ ಸಂದರ್ಭದಲ್ಲಿ ಕೋಮುದಳ್ಳುರಿ ನಡೆಯುತ್ತದೆ.ದಸರಾ ಹಬ್ಬದ ಸಂದರ್ಭದಲ್ಲಿ ದುರ್ಗಾಮತೆಯ ಮೆರವಣಿಗೆಯಲ್ಲಿ ಗಲಾಟೆ ಆಗುತ್ತದೆ.
ಇದನ್ನೂ ಓದಿ: ಭಾರತೀಯ ಚಿತ್ರರಂಗದ ಮೊದಲ ಲಿಪ್ಲಾಕ್ ಸೀನ್! ಯಾವ ಸಿನಿಮಾ? ನಟಿ ಯಾರು? ಇಲ್ಲಿದೆ ಉತ್ತರ… First Lip Lock Scene
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಪದೇ ಪದೇ ಈ ಕೋಮುಗಲಭೆಗಳು ಯಾಕೆ ನಡೆಯುತ್ತಿವೆ? ಕಾಂಗ್ರೆಸ್ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳಿಗೆ ಕೊಂಬು ಬಂದಿದೆ. ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.