ಅಮೆರಿಕಾ: 2,237 ಕೋಟಿ ರೂ. ಲಂಚ ಆರೋಪದಡಿ ಗೌತಮ್ ಅದಾನಿ ಸೇರಿ 7 ಜನರ ವಿರುದ್ಧ ಅಮೆರಿಕದ ನ್ಯಾಯಾಲಯ ಅರೆಸ್ಟ್ ವಾರೆಂಟ್ (Arrest Warrant) ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾ ಪೊಲೀಸರು: ರಾಜ್ಯಾದ್ಯಂತ ಏಕಕಾಲದಲ್ಲಿ 25 ಕಡೆ ದಾಳಿ | Lokayukta raid
2,227 ಕೋಟಿ ರೂ. ಲಂಚದ ಆರೋಪದಲ್ಲಿ ಸಾಗರ್ ಆರ್.ಅದಾನಿ, ಗೌತಮ್ ಅದಾನಿ ಮತ್ತು ವಿನೀತ್ ಎಸ್.ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿಯನ್ನು ನ್ಯೂಯಾರ್ಕ್ನ ಪೂರ್ವ ಜಿಲ್ಲಾ ನ್ಯಾಯಾಲಯಕ್ಕೆ ಯುಎಸ್ನ ಪ್ರಾಸಿಕ್ಯೂಟರ್ ಸಲ್ಲಿಸಿದ್ದರು ಎಂದು ವರದಿ ಉಲ್ಲೇಖಿಸಿದೆ.
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಬಹುಕೋಟಿ ಡಾಲರ್ ಲಂಚ ಮತ್ತು ವಂಚನೆ ಕೇಸ್ನಲ್ಲಿ ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ವಿರುದ್ಧ ಯುಎಸ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ವರದಿಯಾಗಿದೆ,(ಏಜೆನ್ಸೀಸ್).