ನ್ಯೂಸ್

ಇಂದು ಅರವಿಂದ್ ಕೇಜ್ರಿವಾಲ್ ಬಂಧನ? ತಮಗೆ ಮಾಹಿತಿ ಸಿಕ್ಕಿದೆ ಎಂದ ಎಎಪಿ ನಾಯಕರು!

ಹೊಸದಿಲ್ಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭಿಸಿದೆ ಎಂದು ಎಎಪಿ ಟ್ವೀಟ್ ಮೂಲಕ ತಿಳಿಸಿದೆ.

ಆಪಾದಿತ ದೆಹಲಿ ಮದ್ಯ ನೀತಿ ಹಗರಣದಲ್ಲಿ ತಮ್ಮ ಮುಂದೆ ಹಾಜರಾಗುವಂತೆ ಇಡಿ ನೀಡಿದ್ದ ಮೂರನೇ ಸಮನ್ಸ್‌ಗೂ ಕೇಜ್ರಿವಾಲ್ ಪ್ರತಿಕ್ರಿಯಿಸದ ಹಿನ್ನಲೆ ಪಕ್ಷದ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಅರವಿಂದ್​ ಅವರನ್ನು ಇಂದು ಬಂಧಿಸುತ್ತಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ ಎಂದು ಟ್ವೀಟ್​ನಲ್ಲಿ (ಪ್ರಸ್ತುತ ಎಕ್ಸ್​) ಹೇಳಿದ್ದಾರೆ.

"ನಾಳೆ ಬೆಳಗ್ಗೆ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಲಿದೆ ಎಂಬ ಸುದ್ದಿ ಬರುತ್ತಿದೆ. ಹಾಗಾಗಿ ಅವರನ್ನು ಬಂಧಿಸುವ ಸಾಧ್ಯತೆಯಿದೆ" ಎಂದು ಅತಿಶಿ ಟ್ವೀಟ್ ಮಾಡಿದ್ದಾರೆ. ಇದೇ ರೀತಿಯ ಟ್ವೀಟ್‌ಗಳನ್ನು ಅತಿಶಿ ಸಹೋದ್ಯೋಗಿಗಳಾದ ಭಾರದ್ವಾಜ್ ಮತ್ತು ಶಾ ಕೂಡ ಮಾಡಿದ್ದಾರೆ.

"ಗುರುವಾರ (ಜ.4) ಬೆಳಗ್ಗೆ ಮುಖ್ಯಮಂತ್ರಿ ಕೇಜ್ರಿವಾಲ್ ಮನೆಗೆ ಇಡಿ ತಲುಪಲಿದೆ ಮತ್ತು ಅವರನ್ನು ಬಂಧಿಸಲಿದೆ ಎಂಬುದನ್ನು ನಾವು ಕೇಳಿದ್ದೇವೆ" ಎಂದು ಭಾರದ್ವಾಜ್ ಹೇಳಿದ್ದಾರೆ. "ಬ್ರೇಕಿಂಗ್: ನಾಳೆ ಬೆಳಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಇಡಿ ದಾಳಿ ನಡೆಸಲಿದೆ ಎಂದು ಮೂಲಗಳು ಖಚಿತಪಡಿಸಿವೆ. ಅವರನ್ನು ಬಂಧಿಸುವ ಸಾಧ್ಯತೆಯಿದೆ" ಎಂದು ಷಾ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಲು ಇಡಿ ಉದ್ದೇಶಿಸಿದೆ ಮತ್ತು ಚುನಾವಣಾ ಪ್ರಚಾರದಿಂದ ಅವರನ್ನು ತಡೆಯಲು ಬಯಸಿದೆ ಎಂದು ಎಎಪಿ ಆರೋಪಿಸಿದೆ,(ಏಜೆನ್ಸೀಸ್).