ನ್ಯೂಸ್

Assembly Election Results| ಹರಿಯಾಣದಲ್ಲಿ ಕಾಂಗ್ರೆಸ್​ಗೆ ಶಾಕ್​ ನೀಡಿದ ಬಿಜೆಪಿ

ಚಂಡಿಗಢ: ಅಕ್ಟೋಬರ್​ 05ರಂದು ನಡೆದಿದ್ದ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ (Assembly Election Results) ನಡೆಯುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್​ಗೆ ಟಕ್ಕರ್​ ನೀಡಿದೆ.

90 ಸದಸ್ಯಬಲದ ಹರಿಯಾಣ ವಿಧಾನಸಭೆಯಲ್ಲಿ (Haryana Assembly) ಸರ್ಕಾರ ರಚಿಸಲು 46 ಶಾಸಕರ ಅಗತ್ಯವಿದ್ದು, ಬಿಜೆಪಿ (BJP) 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 36 ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress)​ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ನಿಖರ ಪೈಪೋಟಿ ನೀಡುತ್ತಿದೆ. ಜೆಜೆಪಿ (JJP)ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಗಳಿಸಿತ್ತು. ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಯಾಚರಣೆ ಕೂಡ ಆರಂಭವಾಗಿತ್ತು. ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್ ಬದಲಾಗಿದ್ದು, ಬಿಜೆಪಿ ಮುನ್ನಡೆ ಗಳಿಸಿದೆ. ಆ ಮೂಲಕ ಹರಿಯಾಣದಲ್ಲಿ ಹಾವು-ಏಣಿ ಆಟ ಮುಂದುವರೆದಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

ಲೋಕಸಭೆಯ (Loksabha) ಬಳಿಕ ನಡೆಯುತ್ತಿರುವ ಮೊದಲ ರಾಜ್ಯ ವಿಧಾನಸಭೆ ಚುನಾವಣೆಯು(State Assembly Elections) ಮುಂಬರುವ ಮಹಾರಾಷ್ಟ್ರ (Maharashtra) ಹಾಗೂ ಜಾರ್ಖಂಡ್ (Jharkhand)​ ಎಲೆಕ್ಷನ್​ಗೆ ದಿಕ್ಸೂಚಿಯಾಗಿದ್ದು, ಬಿಜೆಪಿ ನೇತೃತ್ವದ ಎನ್​ಡಿಎಗೆ ಈ ಚುನಾವಣೆ ದೊಡ್ಡ ಅಗ್ನಿಪರೀಕ್ಷಯಾಗಿದೆ.