ಬೆಂಗಳೂರು: ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ 15 ಗ್ರೂಪ್ ‘ಎ’ ಸಹಾಯಕ ನಿಯಂತ್ರಕ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳ 1:20 ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ಪ್ರಕಟಿಸಿದೆ.
ಆಯೋಗದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗಿದೆ. ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮಾಹಿತಿಯನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.