ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಅವರು ಶನಿವಾರ (ಸೆಪ್ಟೆಂಬರ್ 21) ಸಂಜೆ ರಾಜ್ ನಿವಾಸದಲ್ಲಿ ಸಂಜೆ 4:30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅತಿಶಿ ಅವರೊಂದಿಗೆ ಐವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದಾಘಿ ವರದಿಯಾಗಿದೆ.
ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿರುವ ದೆಹಲಿಯ ಹಂಗಾಮಿ ಮುಖ್ಯಮಂತ್ರಿ ಕೇಜ್ರಿವಾಲ್ ಸೆಪ್ಟೆಂಬರ್ 15ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.
ಕೇಜ್ರಿವಾಲ್ ರಾಜೀನಾಮೆ ಬಳಿಕ ಸಿಎಂ ಯಾರಾಗಲಿದ್ದಾರೆ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಅತಿಶಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಕೇಜ್ರಿವಾಲ್ ದೆಹಲಿಗೆ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದ್ದರು.