ನ್ಯೂಸ್

ಆಸ್ಪತ್ರೆಯಲ್ಲಿ ಅಗ್ನಿದುರಂತ; ಕನಿಷ್ಠ 10 ಮಂದಿ ಸಾವು..

ಮಧ್ಯಪ್ರದೇಶ: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಮಧ್ಯಪ್ರದೇಶದ ಜಬಲ್​ಪುರ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ. ತಕ್ಷಣ ಕೆಲವು ಅಗ್ನಿಶಾಮಕದಳದ ವಾಹನಳನ್ನು ಸ್ಥಳಕ್ಕೆ ಕರೆತರಲಾಯಿತಾದರೂ ಅಷ್ಟರೊಳಗೆ ಹತ್ತು ಮಂದಿ ಸಾವಿಗೀಡಾಗಿದ್ದಾರೆ.

ರೋಗಿಗಳು, ಅವರ ಸಹಾಯಕರು, ಸಂಬಂಧಿಕರು, ಆಸ್ಪತ್ರೆ ಸಿಬ್ಬಂದಿ ವರ್ಗ ಸೇರಿ ಹಲವರು ಕಟ್ಟಡದಲ್ಲಿದ್ದರು. ಆಸ್ಪತ್ರೆಯ ನೆಲಮಹಡಿಯಲ್ಲಿ ಸಂಭವಿಸಿದ ಶಾರ್ಟ್​ ಸರ್ಕ್ಯೂಟ್​ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.