ನ್ಯೂಸ್

ಕಾರ್ಯಕರ್ತರ ಮೇಲೆ ಹಲ್ಲೆ, ಬಿಜೆಪಿ ಆಕ್ರೋಶ

ಶ್ರೀಕಾಂತ್ ಶೇಷಾದ್ರಿ

ಬೆಂಗಳೂರು: ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ನ ಗೂಂಡಾಗಳು ಸಕ್ರಿಯಗೊಂಡಿದ್ದು ಅಲ್ಲದೆ, ಅವರನ್ನು ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ಶೇಖರ್ ಮೇಲೆ ಕಾಂಗ್ರೆಸ್ಸಿನ ಗೂಂಡಾ ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಸಣ್ಣ ಕೇಸ್ ಹಾಕಿ ರಾಜಾರೋಷವಾಗಿ ಬೀದಿಗೆ ಬಿಟ್ಟಿದೆ ಎಂದು ಆಕ್ಷೇಪಿಸಿದೆ.

ಆ ದಿನಗಳಂತೆ ಚುನಾವಣೆ ಗೆಲ್ಲಲು ಗೂಂಡಾಗಿರಿ ಮಾಡುತ್ತಿರುವ ಅಣ್ಣ-ತಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಕೂಡಲೇ ಚುನಾವಣಾ ಆಯೋಗ ಕಾಂಗ್ರೆಸ್ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ರಾಜ್ಯದಲ್ಲಿ ಚುನಾವಣೆ ನಡೆಯಲು ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ ತುಂಬಬೇಕಿದೆ ಎಂದು ಕೋರಿದೆ.