ನ್ಯೂಸ್

BJP ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ: ಸರ್ಕಾರ ಕೂಡಲೇ ತನಿಖೆಗೆ ಒಪ್ಬಿಸಬೇಕು: ಬಿ. ವೈ. ವಿಜಯೇಂದ್ರ ಒತ್ತಾಯ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬಿಜೆಪಿ(BJP) ನಾಯಕರು ಸೇರಿದಂತೆ ನಮ್ಮವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್​ನ​ ಕೆಲವರಿಂದ ಪದೇಪದೆ ದಾಳಿಗಳು ಆಗುತ್ತೀವೆ. ಹೀಗಾಗಿ ಈ ವಿಷಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆಗೆ ವಹಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ಬಲಗೈ ಬಂಟ ರಾಜುವಿನ ಕಿರುಕುಳದಿಂದ ಆತ್ಮಹತ್ಯೆಗೀಡಾದ ಬೀದರ್​ನ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್​​ನಲ್ಲಿ, ನಮ್ಮ ಪಕ್ಷದ ಶಾಸಕ ಬಸವರಾಜ್ ಮತ್ತಿಮಡು, ಬಿಜೆಪಿ ನಾಯಕರಾದ ಚಂದು ಪಾಟೀಲ್, ಮಣಿಕಂಠ ರಾಥೋಡ್ ಹಾಗೂ ಶ್ರೀ ಆಂದೋಲ ಸ್ವಾಮೀಜಿ ಅವರನ್ನು ಹತ್ಯೆಗೈಯಲು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರರಿಗೆ ಸುಪಾರಿ ನೀಡಿದ್ದಾರೆ ಎನ್ನುವ ಅತಂಕಕಾರಿ ಮತ್ತು ಗಂಭೀರ ಮಾಹಿತಿ ಬಹಿರಂಗವಾಗಿದೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊ0ಡಿದ್ದಾರೆ.

ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ ಶಾಸಕರನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ರಾಜ್ಯದಲ್ಲಿ ನಡೆದ ಘಟನೆಗಳಲ್ಲಿ ಈ ಪ್ರಕರಣವನ್ನು ಮುಖ್ಯಮಂತ್ರಿ ಮಾಡಲಾಗಿದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರವು ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರೇಳಿ ಸುಮಾರು 7 ಪುಟಗಳ ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೆ, ಡೆತ್​ನೋಟ್​ನಲ್ಲಿ 8 ಜನರ ಹೆಸರನ್ನು ಉಲ್ಲೇಖ ಮಾಡಿದ್ದರು.