ನ್ಯೂಸ್

ಅನುದಾನ ಮಂಜೂರು ಮಾಡಿಸಲು ಪ್ರಯತ್ನ

Mysuru Rural

ಭೇರ್ಯ: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ತಾಲೂಕಿಗೆ ಬಿಡುಗಡೆಯಾಗಿದ್ದ 940 ಕೋಟಿ ರೂ.ಗಳ ಅನುದಾನದಲ್ಲಿ ಕೆಲವನ್ನು ಬಿಜೆಪಿ ಸರ್ಕಾರ ತಡೆಹಿದಿದೆ. ಆ ಅನುದಾನವನ್ನು ಮತ್ತೆ ಮಂಜೂರು ಮಾಡಿಸುವೆ ಎಂದು ಶಾಸಕ ಸಾ.ರಾ.ಮಹೇಶ್ ಭರವಸೆ ನೀಡಿದರು.

ಸಂಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀ ವಿಘ್ನವಿನಾಶಕ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಶ್ರೀ ಹುಚ್ಚಲಮ್ಮ ತಾಯಿ ದೇವಸ್ಥಾನ ಉದ್ಘಾಟನೆ ಮಾಡಿ ಮಾತನಾಡಿದರು.

ಸಾಲಿಗ್ರಾಮವನ್ನು ತಾಲೂಕು ಕೇಂದ್ರವನ್ನಾಗಿ ಮಾಡಿದ್ದು, ನಿಮ್ಮ ಗ್ರಾಮದ ಅಭಿವೃದ್ಧಿ ಜತೆಗೆ ದಿನನಿತ್ಯದ ಕೆಲಸ ಕಾರ್ಯಕ್ಕೆ ಹತ್ತಿರವಾಗಿದೆ. 40 ಕೋಟಿ ರೂ. ವೆಚ್ಚದಲ್ಲಿ ಭೇರ್ಯ- ಸಾಲಿಗ್ರಾಮ ಹೆದ್ದಾರಿ ರಸ್ತೆ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದ್ದು, ಗ್ರಾಮ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು.

ಗ್ರಾಮದ ಶ್ರೀ ಹುಚ್ಚಲಮ್ಮ ತಾಯಿ ದೇವಸ್ಥಾನಕ್ಕೆ 8.75 ಲಕ್ಷ ರೂ. ಅನುದಾನ ನೀಡಿದ್ದೇನೆ. ಇದನ್ನು ಸಂಪೂರ್ಣವಾಗಿ ಬಳಸಿಕೊಂಡು ಸುಂದರವಾಗಿ ದೇವಸ್ಥಾನ ನಿರ್ಮಿಸಿಕೊಂಡಿದ್ದೀರಾ. ದೇವಸ್ಥಾನದ ಗೋಪುರ ಮತ್ತು ಕಾಂಪೌಂಡ್ ನಿರ್ಮಾಣಕ್ಕೆ 6 ಲಕ್ಷ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಗ್ರಾಪಂ ಸದಸ್ಯ ಆನಂದ, ಮೈಮುಲ್ ನಿರ್ದೇಶಕ ಎ.ಟಿ.ಸೋಮಶೇಖರ್, ಎಎಸ್‌ಐ ತಿಮ್ಮರಾಜು, ಅರ್ಚಕ ಚಂದ್ರಬುದ್ದಿ,ಪುಟ್ಟಸ್ವಾಮಿ, ಬಸವನಾಯಕ, ಮಹದೇವಪ್ಪ, ಗೌತಮ್, ವಿಶ್ವ ಇತರರು ಇದ್ದರು.