ನ್ಯೂಸ್

ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆಗೆ ಯತ್ನ: 7 ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ತಮ್ಮ ಮೇಲೆ ಕಾಲಿನಿಂದ ಒದ್ದು ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಿ ರಾಜ್ಯ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಗುರುಸ್ವಾಮಿ ಅವರು ನೀಡಿದ ದೂರಿನನ್ವಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ೭ ಮಂದಿಯ ವಿರುದ್ಧ ಎ್ಐಆರ್ ದಾಖಲಾಗಿದೆ.

ಗುರುಸ್ವಾಮಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ವೈನ್ ಮರ್ಚೆಂಟ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್, ಚನ್ನಕೇಶವ ಸೇರಿದಂತೆ ೭ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ೆ.೨೧ ರ ಮಧ್ಯಾಹ ೨ ಗಂಟೆಗೆ ವಿಧಾನಸೌಧದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅಬಕಾರಿ ವಿಷಯಗಳ ಬಗ್ಗೆ ಚರ್ಚಿಸಲು ಗುರುಸ್ವಾಮಿ ಅವರು ಬಂದಿದ್ದರು. ಸಭೆಯ ನಂತರ ಮತ್ತೊಂದು ಸಂಘಟನೆಯ ೭ ಮಂದಿ ಮುಖ್ಯಮಂತ್ರಿಗಳ ಸಭೆಯಲ್ಲಿ ನಮಗೆ ಮಾತನಾಡಲು ಅವಕಾಶ ಸಿಗಲಿಲ್ಲ. ಇದಕ್ಕೆ ನೀವುಗಳೇ ಕಾರಣ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾದ್ದರು. ಈ ವೇಳೆ ಅಲ್ಲೆ ಇದ್ದ ಸಂಘದ ಪದಾಧಿಕಾರಿಗಳು ಮತ್ತು ಪೊಲೀಸರು ತಡೆಯುವಷ್ಟರಲ್ಲಿ ಚಂದ್ರಶೇಖರ್ ನನಗೆ ಕಾಲಿನಿಂದ ಒದ್ದರು. ಹೀಗಾಗಿ ಹಲ್ಲೆಗೆ ಯತ್ನಿಸಿದ ೭ ಮಂದಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನ ಮೇರೆಗೆ ಮೊದಲು ಎನ್‌ಸಿಆರ್ ದಾಖಲಿಸಿಕೊಂಡು, ಈ ಸಂಬಂಧ ಎ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲು ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಬಳಿಕ ನ್ಯಾಯಾಲಯ ನೀಡಿದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.