ಶಿವಮೊಗ್ಗ: ಫೆಬ್ರವರಿಯಲ್ಲಿ ಉದ್ಘಾಟನೆಗೆ ಸಜ್ಜಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಅಂತಿಮ ಹಂತಕ್ಕೆ ತಲುಪಿದ್ದು ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಭೇಟಿ ನೀಡಿ ವಿವಿಧ ಕಾಮಗಾರಿಗಳು, ನಿಲ್ದಾಣದ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು.
ವಿಮಾನ ನಿಲ್ದಾಣದ ಟರ್ಮಿನಲ್, ರನ್‌ವೇ, ಕಟ್ಟಡ ಸೇರಿದಂತೆ ಹಲವು ಕಾಮಗಾರಿಗಳನ್ನು ಪರಿಶೀಲಿಸಿ ಇಂಜಿನಿಯರ್‌ಗಳು, ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಈಗಾಗಲೇ ಅಂತಿಮ ಹಂತಕ್ಕೆ ನಿಲ್ದಾಣದ ಕಾಮಗಾರಿಗಳು ತಲುಪಿದ್ದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಇದೇ ವೇಳೆ ಕೆಲವೊಂದು ಸಲಹೆ, ನಿರ್ದೇಶನಗಳನ್ನೂ ಅಧಿಕಾರಿಗಳಿಗೆ ನೀಡಿದರು. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಕಾಂತರಾಜ್, ಇಇ ಸಂಪತ್ ಪಿಂಗಳೆ, ಎಇಇ ಕಿರಣ್‌ಕುಮಾರ್ ಇತರ ಅಧಿಕಾರಿಗಳು ಹಾಜರಿದ್ದರು.