ಜಿಲ್ಲಾಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಉಪಸ್ಥಿತರಿದ್ದರು.
- ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಅರಿವು
- ಮಕ್ಕಳಲ್ಲಿ ಶಿಕ್ಷಣ ಜಾಗೃತಿ
ಮಂಗಳೂರು: ಯುವಪೀಳಿಗೆ ಮಾದಕದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.
ಪುರಭವನದಲ್ಲಿ ಮಂಗಳವಾರ ಜಿಲ್ಲಾಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮಾದಕದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳಲ್ಲಿ ಶಿಕ್ಷಣ ಜಾಗೃತಿ, ಪ್ರೀತಿಯ ಕುಟುಂಬದ ವಾತಾವರಣ, ಕಠಿಣ ಕಾನೂನುಗಳು ಮತ್ತು ಆರೋಗ್ಯಕರ ಜೀವನಶೈಲಿ ಉತ್ತೇಜಿಸುವ ಮೂಲಕ ಮಾದಕವ್ಯಸನ ತಡೆಗಟ್ಟಬಹುದು ಎಂದರು.
ಮಕ್ಕಳ ಚಲನವಲನಗಳ ಬಗ್ಗೆ ಪಾಲಕರು, ಶಿಕ್ಷಕರು ನಿಗಾವಹಿಸಬೇಕು. ಇಲ್ಲವಾದರೆ ಕುಟುಂಬದ ಸ್ವಾಸ್ಥ್ಯ ಹಾಳಾಗಲು ಪ್ರಾರಂಭವಾಗುತ್ತದೆ. ಮಕ್ಕಳು ಸಾಮಾಜಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಪಾಲಕರು, ಶಾಲಾ ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳಲ್ಲಿ ಮಕ್ಕಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಉಪಸ್ಥಿತರಿದ್ದರು.
ಮಾದಕ ವ್ಯಸನ ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಜೀವನ ನಾಶಪಡಿಸುವ ಒಂದು ಗಂಭೀರ ಪಿಡುಗು. ಎಲ್ಲ ಕಾಲೇಜುಗಳಲ್ಲಿ ಪ್ರತೀ ತಿಂಗಳಿಗೊಮ್ಮೆ ತಪಾಸಣೆ ನಡೆಸಿ ಕೌನ್ಸೆಲಿಂಗ್ ನಡೆಸುವುದರೊಂದಿಗೆ, ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು.
ಸುಧೀರ್ ಕುಮಾರ್ ರೆಡ್ಡಿ ಪೊಲೀಸ್ ಆಯುಕ್ತ