ಶಿವಮೊಗ್ಗ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಶಾರದಾ ಪೂರ‌್ಯಾನಾಯ್ಕಾ, ವೇದಾ ವಿಜಯಕುಮಾರ್, ಹರೀಶ್ ನಾಯ್ಕ, ಡಾ.ಎಸ್.ಲಿಂಗರಾಜ ಇದ್ದರು. 
ನ್ಯೂಸ್

ಶೆಟ್ಟಿಹಳ್ಳಿ ಗ್ರಾಮದಲ್ಲಿ ಆಯುರ್ವೇದ ಚಿಕಿತ್ಸಾಲಯ ಉದ್ಘಾಟನೆ

ಶಿವಮೊಗ್ಗ: ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.

ಶಾಸಕಿ ಶಾರದಾ ಪೂರ‌್ಯಾನಾಯ್ಕಾ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ನಾಯ್ಕ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಎಸ್.ಲಿಂಗರಾಜ, ಶೆಟ್ಟಿಹಳ್ಳಿ ವೈದ್ಯಾಧಿಕಾರಿ ಡಾ. ಟಿ.ಸಿ.ಮಹಾಲಿಂಗಪ್ಪ, ಮುಖಂಡರಾದ ವಿಜಯಕುಮಾರ್, ಶಾಂತವೀರ ನಾಯ್ಕ, ಹನುಮಂತು, ಜಗದೀಶ್ ಕಾಟಿಕೆರೆ ಉಪಸ್ಥಿತರಿದ್ದರು.